Ezekiel 11:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಆತ್ಮವು ನನ್ನನ್ನು ಆಕಾಶಕ್ಕೆ ಎತ್ತಿ ಬಾಬಿಲೋನ್ ದೇಶಕ್ಕೆ ಮರಳಿ ತಂದಿತು. ಸೆರೆ ಒಯ್ಯಲ್ಪಟ್ಟಿದ್ದ ಜನರ ಮಧ್ಯೆ ನಾನು ಘಂದೆನು. ದೇವಾರಾತ್ಮವು ಕೊಟ್ಟ ದರ್ಶನದಲ್ಲಿ ನಾನು ಆ ಎಲ್ಲಾ ವಿಷಯಗಳನ್ನು ಕಂಡೆನು. ಬಳಿಕ, ನಾನು ಕಂಡ ಆ ದರ್ಶನವು ನನ್ನನ್ನು ಬಿಟ್ಟುಹೋಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯ ದರ್ಶನದ ಮುಖಾಂತರ ಕಸ್ದೀಯರ ದೇಶದಲ್ಲಿ ಸೆರೆಯಾದವರ ಬಳಿಗೆ ಕರೆತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.
Kannada BSI Bible 2016
ಅನಂತರ ಆತ್ಮನು ನನ್ನನ್ನು ಎತ್ತಿ ದೇವರ ಆತ್ಮದಿಂದಾದ ದರ್ಶನದಿಂದ ಕಸ್ದೀಯರ ದೇಶಕ್ಕೆ ಸೆರೆಯವರ ಬಳಿಗೆ ಕರೆದುಕೊಂಡು ಹೋದನು; ಆಗ ನಾನು ನೋಡಿದ ದರ್ಶನವು ನನ್ನಿಂದ ಇಲ್ಲದೆ ಹೋಯಿತು.ಆಮೇಲೆ ಕರ್ತನು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯವರೊಂದಿಗೆ ನಾನು ಮಾತನಾಡಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ದೇವರಾತ್ಮವು ಪರವಶನಾದ ನನ್ನನ್ನು ಎತ್ತಿ ದಿವ್ಯದರ್ಶನದ ಮುಖಾಂತರ ಕಸ್ದೀಯ ದೇಶದಲ್ಲಿ ಸೆರೆಯಾದವರ ಬಳಿಗೆ ಒಯ್ದುಕೊಂಡು ಬಂತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.
Kannada Bible (KNCL) BSI 2016
ಆ ಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯದರ್ಶನದ ಮುಖಾಂತರ ಬಾಬಿಲೋನಿಯ ದೇಶದಲ್ಲಿ ಸೆರೆಯಾಗಿದ್ದವರ ಬಳಿಗೆ ಒಯ್ದು ತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ದೇವರಾತ್ಮರು, ದೇವರ ಆತ್ಮರಿಂದಾದ ದರ್ಶನದಲ್ಲಿ ನನ್ನನ್ನು ಬಾಬಿಲೋನಿಯರ ದೇಶಕ್ಕೆ ಸೆರೆಯವರ ಬಳಿಗೆ ಎತ್ತಿಕೊಂಡು ಹೋದರು. ಆಗ ನಾನು ನೋಡಿದ ದರ್ಶನವು ನನ್ನಿಂದ ಮೇಲೆ ಹೋಯಿತು.