Ezekiel 11:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನ ಆತ್ಮನು ನನ್ನ ಮೇಲೆ ಬಂದನು. ಆತನು ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನರಿಗೆ ತಿಳಿಸು: ಇಸ್ರೇಲ್ ಮನೆತನವೇ, ನೀನು ದೊಡ್ಡದೊಡ್ಡ ವಿಷಯಗಳನ್ನು ಆಲೋಚಿಸುತ್ತೀ. ನೀನು ಏನೂ ಯೋಚಿಸುತ್ತೀ ಎಂದ ನಾನು ಘಲ್ಲೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನ ಆತ್ಮವು ನನ್ನಲ್ಲಿ ಆವೇಶ ಉಂಟುಮಾಡಿ, ಹೀಗೆ ಸಾರಬೇಕೆಂದು ಅಪ್ಪಣೆಯಾಯಿತು. ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನೀವು ಹೀಗೆ ಮಾತನಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.
Kannada BSI Bible 2016
ಕರ್ತನ ಆತ್ಮನು ನನ್ನ ಮೇಲೆ ಬಂದು ನನಗೆ ಹೇಳಿದ್ದೇನಂದರೆ--ಮಾತನಾಡು; ಕರ್ತನು--ಇಸ್ರಾ ಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಯಾಕಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನೂ ನಾನು ಬಲ್ಲೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನ ಆತ್ಮವು ನನ್ನಲ್ಲಿ ಆವೇಶಿಸಲು ಹೀಗೆ ಸಾರಬೇಕೆಂದು ಅಪ್ಪಣೆಯಾಯಿತು. ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನೀವು ಹೀಗೆ ಮಾತಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.
Kannada Bible (KNCL) BSI 2016
ಆಗ ಸರ್ವೇಶ್ವರನ ಆತ್ಮ ನನ್ನಲ್ಲಿ ಆವೇಶ ಉಂಟುಮಾಡಿತು. ಹೀಗೆ ಸಾರಬೇಕೆಂದು ಅಪ್ಪಣೆ ಆಯಿತು: ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲ್ ವಂಶದವರೇ, ನೀವು ಹೀಗೆ ಮಾತಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಆತ್ಮವು ನನ್ನ ಮೇಲೆ ಬಂದು ತಿಳಿಸಲು ಹೇಳಿದ್ದೇನೆಂದರೆ: “ಇಸ್ರಾಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಏಕೆಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನು ನಾನು ಬಲ್ಲೆನು.