Ezekiel 11:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ‘ಆ ಹೆಣಗಳು ಮಾಂಸದಂತಿವೆ. ನಗರವು ಮಡಕೆಯಂತಿದೆ. ಆದರೆ ನಾನು ನಿಮ್ಮನ್ನು ಸುರಕ್ಷಿತವಾದ ಆ ಮಡಕೆಯಿಂದ ತೆಗೆದುಬಿಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.
Kannada BSI Bible 2016
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಅದರ ಮಧ್ಯದಲ್ಲಿ ಇಟ್ಟಿರುವ ಹತರಾದವರು ಅವರೇ ಮಾಂಸವಾಗಿದ್ದಾರೆ, ಈ ಪಟ್ಟಣವು ಹಂಡೆಯಾಗಿದೆ. ಆದರೆ ನಾನು ನಿಮ್ಮನ್ನು ಆದರಿಂದ ಹೊರಗೆ ತರುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವು ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.
Kannada Bible (KNCL) BSI 2016
“ಆದಕಾರಣ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಕೊಂದು ಹಾಕಿದವರ ದೇಹಗಳೇ ಮಾಂಸ, ಈ ಪಟ್ಟಣವು ಬೇಯಿಸುವ ಪಾತ್ರೆ. ಆದರೆ ನಾನು ನಿಮ್ಮನ್ನು ಅದರಿಂದ ಹೊರಗೆ ತರುತ್ತೇನೆ.