Ezekiel 12:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ಒಡೆಯನಾದ ಯೆಹೋವನು ಇದನೆಐಲ್ಲಾ ಹೇಳಿದನು ಎಂದು ಅವರಿಗೆ ತಿಳಿಸು. ಈ ಸಂದೇಶವು ಜೆರುಸಲೇಮಿನ ನಾಯಕರ ಮತ್ತು ಅಲ್ಲಿ ವಾಸಿಸುವ ಇಸ್ರೇಲ್ ಜನರೆಲ್ಲರ ಕುರಿತಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಅವರಿಗೆ ಹೀಗೆ ನುಡಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಈ ಹೊರೆಯು ಯೆರೂಸಲೇಮಿನಲ್ಲಿರುವ ರಾಜನಿಗೂ, ಅಲ್ಲಿನ ಇಸ್ರಾಯೇಲ್ ವಂಶದವರೆಲ್ಲರಿಗೂ ಸಂಬಂಧಪಟ್ಟಿದೆ.’
Kannada BSI Bible 2016
ಅವರಿಗೆ ನೀನು ಹೀಗೆ ಹೇಳಬೇಕು ಎಂದು ದೇವರಾದ ಕರ್ತನು ಹೇಳುತ್ತಾನೆ--ಈ ಭಾರವು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ ಅದರ ಮಧ್ಯದಲ್ಲಿರುವ ಸಮಸ್ತ ಇಸ್ರಾ ಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಅವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಈ ಹೊರೆಯು ಯೆರೂಸಲೇವಿುನಲ್ಲಿರುವ ಪ್ರಭುವಿಗೂ ಅಲ್ಲಿನ ಇಸ್ರಾಯೇಲ್ ವಂಶದವರೆಲ್ಲರಿಗೂ ಸಂಬಂಧಪಟ್ಟಿದೆ.
Kannada Bible (KNCL) BSI 2016
ನೀನು ಅವರಿಗೆ ಹೀಗೆ ನುಡಿ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಈ ಹೊರೆ ಜೆರುಸಲೇಮಿನಲ್ಲಿರುವ ರಾಜನಿಗೂ ಅಲ್ಲಿನ ಇಸ್ರಯೇಲ್ ವಂಶದವರೆಲ್ಲರಿಗೂ ಸಂಬಂಧಪಟ್ಟಿದೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರಿಗೆ ನೀನು ಹೀಗೆ ಹೇಳಬೇಕೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ಈ ಪ್ರವಾದನೆಯು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ, ಅದರಲ್ಲಿರುವ ಸಮಸ್ತ ಇಸ್ರಾಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ.