Ezekiel 12:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ತಪ್ಪಿಸಿಕೊಳ್ಳಲು ಪ್ರಯತಐ ಮಾಡುವನು. ಆದರೆ, ನಾನು (ಯೆಹೋವನು) ಅವನನ್ನು ಹಿಡಿಯುವೆನು. ಅವನು ನನ್ನ ಘಲೆಯೊಳಗೆ ಬೀಳುವನು. ನಾನು ಅವನನ್ನು ಕಸ್ದೀಯರ ದೇಶವಾದ ಬಾಬಿಲೋನಿಗೆ ತರುವೆನು. ಅವನು ಆ ದೇಶವನ್ನು ನೋಡುವುದಿಲ್ಲ; ಅಲ್ಲದೆ ಅವನು ಅಲ್ಲಿ ಸಾಯುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು; ಕಸ್ದೀಯರ ದೇಶವಾದ ಬಾಬಿಲೋನಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡುವುದಿಲ್ಲ.
Kannada BSI Bible 2016
ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರ್ಲಿನಲ್ಲಿ ಸಿಕ್ಕಿಬೀಳುವನು; ಕಸ್ದೀಯ ದೇಶದ ಬಾಬೆಲಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡನು.
Kannada Bible (KNCL) BSI 2016
ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು: ಬಾಬಿಲೋನಿಯಾ ದೇಶದ ಬಾಬಿಲೋನ್ ನಗರಕ್ಕೆ ಅವನನ್ನು ಒಯ್ಯುವೆನು; ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಬಲೆಯನ್ನೂ ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯರ ನಾಡಾದ ಬಾಬಿಲೋನಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.