Ezekiel 12:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ನಾನು ಅವರಲ್ಲಿ ಕೆಲವರನ್ನು ಯುದ್ಧಗಳಿಂದ, ಬರಗಾಲಗಳಿಂದ ಮತ್ತು ರೋಗಗಳಿಂದ ಉಳಿಸುವೆನು. ಅವರು ತಾವು ಹೋಗುವ ದೇಶಗಳಲ್ಲಿನ ಜನರಿಗೆ ತಮ್ಮ ಅಸಹ್ಯವಾದ ಆಚರಣೆಗಳ ಕುರಿತು ಹೇಳಲಾಗುವಂತೆ ನಾನು ಇದನ್ನು ಮಾಡುತ್ತೇನೆ. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಕೆಲವರನ್ನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯ ಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”
Kannada BSI Bible 2016
ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಕೆಲವರನ್ನು ಖಡ್ಗ ಕ್ಷಾಮವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವದಕ್ಕೆ ಅವಕಾಶಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವದು.
Kannada Bible (KNCL) BSI 2016
ನಾನು ಕೆಲವರನ್ನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ಉಳಿಸಿ, ಅವರು ತಮ್ಮ ಅಸಹ್ಯಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು: ನಾನೇ ಸರ್ವೇಶ್ವರ ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ಎಲ್ಲಿ ಹೋಗುವರೋ, ಆ ಜನಾಂಗಗಳೊಳಗೆ ಅವರ ಹೇಯ ಕಾರ್ಯಗಳನ್ನು ಇವರು ತಿಳಿದುಕೊಳ್ಳುವಂತೆ ಅವರಲ್ಲಿ ಕೆಲವರನ್ನು ಖಡ್ಗದಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವರು.”