Ezekiel 12:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನರಪುತ್ರನೇ, ನೀನು ಭೀತಿಯಲ್ಲಿರುವವನಂತೆ ನಟನೆ ಮಾಡಙೇಕು. ನೀನು ಆಹಾರ ತೆಗೆದುಕೊಳ್ಳುವಾಗ ನಡುಗಬೇಕು. ನೀರು ಕುಡಿಯುವಾಗ ಭಯಪಡಬೇಕು ಮತ್ತು ಚಿಂತಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ನೀನು ಅನ್ನವನ್ನು ನಡುಗುತ್ತಾ ತಿನ್ನು ಮತ್ತು ನೀರನ್ನು ಹೆದರಿಕೆಯಿಂದ ಕುಡಿ.
Kannada BSI Bible 2016
ಮನುಷ್ಯಪುತ್ರನೇ, ನಿನ್ನ ರೊಟ್ಟಿ ಯನ್ನು ನಡುಕದಿಂದ ತಿನ್ನು ಮತ್ತು ನೀರನ್ನು ದಿಗಿಲಿ ನಿಂದಲೂ ಎಚ್ಚರಿಕೆಯಿಂದಲೂ ಕುಡಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ನೀನು ಅನ್ನವನ್ನು ನಡುಕದಿಂದ ತಿಂದು ನೀರನ್ನು ಅದರುಬೆದರಿನಿಂದ ಕುಡಿದು
Kannada Bible (KNCL) BSI 2016
“ನರಪುತ್ರನೇ, ನೀನು ಅನ್ನವನ್ನು ಅಂಜಿಕೆಯಿಂದ ತಿಂದು, ನೀರನ್ನು ನಡುಕದಿಂದ ಕುಡಿದು, ಆ ದೇಶದಲ್ಲಿರುವ ಜನರಿಗೆ ಹೀಗೆ ಹೇಳು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ಆಹಾರವನ್ನು ನಡುಗುತ್ತಾ ಊಟಮಾಡು ಮತ್ತು ನೀರನ್ನು ನಡುಗುವಿಕೆಯಿಂದಲೂ, ಎಚ್ಚರಿಕೆಯಿಂದಲೂ ಕುಡಿ.