Ezekiel 12:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆ ಜನರಿಗೆ ಹೀಗೆ ಹೇಳು: ಅವರ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ನಾನು ಈ ಗಾದೆಗೆ ಅಂತ್ಯವನ್ನು ಬರಮಾಡುವೆನು. ಇಸ್ರೇಲಿನಲ್ಲಿ ಆ ಗಾದೆಯನ್ನು ಅವರು ಇನ್ನೆಂದಿಗೂ ಘಳಸುವುದಿಲ್ಲ. ಅದರ ಘದಲಾಗಿ ಅವರಿಗೆ ಹೀಗೆ ಹೇಳು: ಸಂಕಷ್ಟದ ದಿನಗಳು ಸಮೀಪಿಸಿವೆ; ಪ್ರತಿಯೊಂದು ದರ್ಶನವೂ ನೆರವೇರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಗೆ ಹೀಗೆ ಹೇಳು, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಗಾದೆಯನ್ನು ಬಳಸುವುದನ್ನು ನಿಲ್ಲಿಸಿಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಈ ಮಾತನ್ನು ಕೇಳಿರಿ, ‘ಕ್ಲುಪ್ತಕಾಲವು ಸಮೀಪಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ.
Kannada BSI Bible 2016
ಆದದರಿಂದ ಅವರಿಗೆ ಹೀಗೆ ಹೇಳು ದೇವರಾದ ಕರ್ತನು ಹೇಳುವದೇನಂದರೆ--ನಾನು ಈ ಗಾದೆ ಯನ್ನು ನಿಲ್ಲಿಸುತ್ತೇನೆ, ಅದನ್ನು ಇನ್ನು ಮೇಲೆ ಇಸ್ರಾ ಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವದಿಲ್ಲ; ದಿನಗಳು ಹತ್ತಿರವಾಗಿವೆ ಪ್ರತಿ ದರ್ಶನವು ಸವಿಾಪ ವಾಗಿದೆ ಎಂದು ಅವರಿಗೆ ಹೇಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ಗಾದೆಯನ್ನು ನಿಲ್ಲಿಸಿ ಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಈ ಮಾತನ್ನು ಕೇಳಿರಿ - ಕ್ಲುಪ್ತಕಾಲವು ಹತ್ತಿರಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವದು ಸಮೀಪ.
Kannada Bible (KNCL) BSI 2016
ಅವರಿಗೆ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಈ ಗಾದೆಯನ್ನು ನಿಲ್ಲಿಸಿಬಿಡುವೆನು; ಅದು ಇಸ್ರಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಆ ಮಾತನ್ನು ಕೇಳಿರಿ: ಕ್ಲುಪ್ತಕಾಲ ಹತ್ತಿರಬಂದಿದೆ. ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನಾನು ಈ ಗಾದೆಯನ್ನು ನಿಲ್ಲಿಸುತ್ತೇನೆ. ಅದನ್ನು ಇನ್ನು ಮೇಲೆ ಇಸ್ರಾಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವುದಿಲ್ಲ. ದಿನಗಳು ಹತ್ತಿರವಾಗಿವೆ. ಪ್ರತಿದರ್ಶನವು ನೆರವೇರಲಿದೆ’ ಎಂದು ಅವರಿಗೆ ಹೇಳು.