Ezekiel 12:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೆಂದರೆ ನಾನೇ ಯೆಹೋವನು. ನನಗೆ ಇಷ್ಟಬಂದದ್ದನ್ನು ನಾನು ಹೇಳುವೆನು ಮತ್ತು ಆ ಸಂಗತಿಯು ನೆರವೇರುವುದು. ಅದಕ್ಕೆ ಹೆಚ್ಚು ಸಮಯಙೇಕಾಗದು. ಆ ಸಂಕಟಗಳು ಙೇಗನೇ ಬರುವವು; ನಿಮ್ಮ ಜೀವಮಾನ ಕಾಲದಲ್ಲಿಯೇ ಬರುವವು. ಓ ದಂಗೆಕೋರರಾದ ಜನರೇ, ನಾನು ಒಂದು ವಿಷಯದಲ್ಲಿ ಏನಾದರೂ ಹೇಳಿದರೆ ಆ ವಿಷಯವು ಸಂಭವಿಸುವಂತೆ ಮಾಡುವೆನು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು’” ಇದು ಕರ್ತನಾದ ಯೆಹೋವನ ವಾಕ್ಯ.
Kannada BSI Bible 2016
ನಾನೇ ಕರ್ತನು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವದು, ಅದು ಇನ್ನು ನಿಧಾನವಾಗುವದಿಲ್ಲ. ಓ ತಿರುಗಿ ಬೀಳುವ ಮನೆತನ ದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು; ಇದು ಕರ್ತನಾದ ಯೆಹೋವನ ವಾಕ್ಯ.
Kannada Bible (KNCL) BSI 2016
ನಾನೇ ಸರ್ವೇಶ್ವರ; ನಾನು ನುಡಿದೆ ತೀರುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು. ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು. ಇದು ಸರ್ವೇಶ್ವರನಾದ ದೇವರ ವಾಕ್ಯ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನೇ ಯೆಹೋವ ದೇವರು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವುದು; ಅದು ಇನ್ನು ನಿಧಾನವಾಗುವುದಿಲ್ಲ. ದ್ರೋಹಿಗಳಾದ ಮನೆತನದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡೆಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”