Ezekiel 12:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅವರಿಗೆ ನೀನು ಈ ವಿಷಯವನ್ನು ತಿಳಿಸು, “ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: ಏನೆಂದರೆ ನಾನು ಇನ್ನು ಹೆಚ್ಚು ತಡಮಾಡುವುದಿಲ್ಲ. ನಾನೊಂದು ವಿಷಯವು ನೆರವೇರುವುದು ಎಂದು ಹೇಳಿದರೆ ಅದು ಖಂಡಿತ ನೆರವೇರುವುದು.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದಕಾರಣ ನೀನು ಅವರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ನೆರವೇರದೆ ಇರದು; ನಾನಾಡುವ ಮಾತು ನೆರವೇರುವುದು ಖಂಡಿತ’ ಇದು ಕರ್ತನಾದ ಯೆಹೋವನ ನುಡಿ.”
Kannada BSI Bible 2016
ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನೀನು ಅವರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವದೂ ಸಾವಕಾಶವಾಗದು; ನಾನಾಡುವ ಮಾತು ನೆರವೇರುವದು ಖಂಡಿತ; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ಆದಕಾರಣ ನೀನು ಅವರಿಗೆ ಹೀಗೆ ಹೇಳು: ಸರ್ವೇಶ್ವರನಾದ ದೇವರು ಹೇಳುವುದನ್ನು ಗಮನಿಸಿ: ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ಸಾವಕಾಶವಾಗದು; ನಾನಾಡುವ ಮಾತು ನೆರವೇರುವುದು ಖಂಡಿತ; ಇದು ಸರ್ವೇಶ್ವರನಾದ ದೇವರ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಅವರಿಗೆ ಹೀಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಇಂತೆನ್ನುತ್ತಾರೆ, ನನ್ನ ಯಾವುದೇ ಮಾತು ಇನ್ನು ತಡವಾಗದು. ನಾನು ಹೇಳಿದ್ದೆಲ್ಲವನ್ನು ನೆರವೇರುವುದೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”