Ezekiel 12:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾತ್ರಿಕಾಲದಲ್ಲಿ ಚೀಲವನ್ನು ಹೆಗಲಿಗೇರಿಸಿ ಹೊರಗೆ ನಡಿ. ನೀನು ನೆಲವನ್ನು ನೋಡಲಾಗದಂತೆ ನಿನ್ನ ಮುಖವನ್ನು ಮುಚ್ಚಿಕೋ. ಇದೆಲ್ಲಾ ಮಾಡುವಾಗ ಜನರು ನಿನ್ನನ್ನು ನೋಡುತ್ತಿರಬೇಕು. ಯಾಕೆಂದರೆ ನಿನ್ನನ್ನು ನಾನು ಇಸ್ರೇಲರಿಗೆ ಒಂದು ನಿದರ್ಶನವಾಗಿ ಉಪಯೋಗಿಸುತ್ತಿದ್ದೇನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಕಣ್ಣ ಮುಂದೆ, ಅದನ್ನು ಹೆಗಲ ಮೇಲೆ ಹಾಕಿ, ಕತ್ತಲಲ್ಲಿ ಹೊತ್ತುಕೊಂಡು ಹೋಗು; ನೆಲವನ್ನು ನೋಡದಂತೆ ಮುಖವನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಗುರುತನ್ನಾಗಿ ಮಾಡಿದ್ದೇನೆ.”
Kannada BSI Bible 2016
ಅವರ ಕಣ್ಣು ಗಳ ಮುಂದೆ ಸಾಮಾಗ್ರಿಯನ್ನು ಹೆಗಲಿನ ಮೇಲೆ ಹೊತ್ತುಕೊಂಡು ನಸುಬೆಳಕಿನಲ್ಲಿ ಹೋಗಬೇಕು; ನೆಲ ವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿ ಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನ ದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಕಣ್ಣ ಮುಂದೆ ಅದನ್ನು ಹೆಗಲ ಮೇಲೆ ಹಾಕಿ ಕತ್ತಲಲ್ಲಿ ಹೊತ್ತುಕೊಂಡು ಹೋಗು; ನೆಲವನ್ನು ನೋಡದಂತೆ ಮೋರೆಯನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಮುಂಗುರುತನ್ನಾಗಿ ಮಾಡಿದ್ದೇನೆ.
Kannada Bible (KNCL) BSI 2016
ಅವರ ಕಣ್ಣ ಮುಂದೆ, ಅದನ್ನು ಹೆಗಲ ಮೇಲೆಹಾಕಿ, ಕತ್ತಲಲ್ಲಿ ಹೊತ್ತುಕೊಂಡುಹೋಗು; ನೆಲವನ್ನು ನೋಡದಂತೆ ಮೋರೆಯನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಯೇಲ್ ವಂಶದವರಿಗೆ ಮುಂಗುರುತನ್ನಾಗಿ ಮಾಡಿದ್ದೇನೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಕಣ್ಣುಗಳ ಮುಂದೆ ಸಲಕರಣೆಗಳನ್ನು ಹೆಗಲಿನ ಮೇಲೆ ಹೊತ್ತುಕೊಂಡು ಮುಸ್ಸಂಜೆಯಲ್ಲಿ ಹೋಗಬೇಕು; ನೆಲವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.”