Ezekiel 13:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗೋಡೆಗೆ ಮಡ್ಡಿ ಮಾಡುವವರಿಗೆ ಹೀಗೆ ಹೇಳು: ನಾನು ಆಲಿಕಲ್ಲು ಮತ್ತು ಘಲವಾದ ಮಳೆಯನ್ನು ಕಳುಹಿಸುವೆನು. ಗಾಳಿಯು ಘಲವಾಗಿ ಬೀಸಿ ಸುಂಟರಗಾಳಿಯು ಬರುವುದು. ಆಗ ಗೋಡೆಯು ಮುರಿದುಬೀಳುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ, ನೀನು ಸುಣ್ಣಬಳಿಯುವವರಿಗೆ ಹೀಗೆ ನುಡಿ, ‘ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವುದು.’
Kannada BSI Bible 2016
ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನೀನು ಸುಣ್ಣಬಳಿಯುವವರಿಗೆ ಹೀಗೆ ನುಡಿ - ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವದು, ಆನೆಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವದು;
Kannada Bible (KNCL) BSI 2016
ಆದಕಾರಣ, ನೀನು ಸುಣ್ಣ ಬಳಿಯುವವರಿಗೆ ಹೀಗೆ ನುಡಿ: ‘ವಿಪರೀತ ಮಳೆಯಾಗಿ ಗೋಡೆ ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವುವು; ಬಿರುಗಾಳಿ ಗೋಡೆಯನ್ನು ಕೆಡವಿಹಾಕುವುದು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಸುಣ್ಣ ಹಚ್ಚುತ್ತಿರುವವನಿಗೆ ಅದು ಬೀಳುವುದೆಂದು ಹೇಳು. ಅಲ್ಲಿ ವಿಪರೀತ ಮಳೆ ಬರುವುದು ಮತ್ತು ದೊಡ್ಡ ಕಲ್ಮಳೆಯು ಬೀಳುವುದು. ಬಿರುಗಾಳಿಯು ಅದನ್ನು ಸೀಳಿಬಿಡುವುದು.