Ezekiel 13:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇವೆಲ್ಲಾ ಇಸ್ರೇಲಿನ ಸುಳ್ಳು ಪ್ರವಾದಿಗಳಿಗಾಗುವದು. ಆ ಪ್ರವಾದಿಗಳು ಜೆರುಸಲೇಮಿನ ಬಗ್ಗೆ ಪ್ರವಾದಿಸಿದರು ಮತ್ತು ಶಾಂತಿಯಿಲ್ಲದಿರುವಾಗಲೂ ಶಾಂತಿಯ ದರ್ಶನಗಳನ್ನು ಕಂಡರು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಇಸ್ರಾಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯಿದೆ ಎಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇಮಿನ ವಿಷಯವಾಗಿ ಪ್ರವಾದಿಸಿದ್ದೀರಲ್ಲವೆ? ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು’” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲಿನ ಪ್ರವಾದಿಗಳೇ, ಕ್ಷೇಮವಿಲ್ಲದಿದ್ದರೂ ಕ್ಷೇಮವಾಗುವದೆಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇವಿುನ ವಿಷಯವಾಗಿ ಪ್ರವಾದಿಸಿದ್ದೀರಲ್ಲಾ; ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು. ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
‘ಇಸ್ರಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯ ದರ್ಶನಗಳನ್ನು ನೀವು ಕಂಡು ಜೆರುಸಲೇಮಿನ ಬಗ್ಗೆ ಪ್ರವಾದಿಸಿದ್ದೀರಲ್ಲವೆ? ಗೋಡೆ ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು; ಇದು ಸರ್ವೇಶ್ವರನಾದ ದೇವರ ನುಡಿ.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೂಸಲೇಮಿನ ವಿಷಯ ಪ್ರವಾದಿಸಿ, ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ಇರುವುದಿಲ್ಲವೆಂದೂ, ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” ’