Ezekiel 13:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರೆದುರಿನಲ್ಲಿ ನನಗೆ ನೀವು ಮಹತಬವನ್ನು ಕೊಡುವದಿಲ್ಲ. ಸಬಲ್ಪ ಬಾರ್ಲಿಗಾಗಿಯೂ ಕೆಲವು ತುಂಡು ರೊಟ್ಟಿಗಾಗಿಯೂ ನೀವು ನನಗೆ ವಿರುದ್ಧವಾಗಿ ವರ್ತಿಸುತ್ತೀರಿ. ನನ್ನ ಜನರಿಗೆ ನೀವು ಸುಳ್ಳನ್ನು ಆಡುತ್ತೀರಿ. ಅವರಿಗೆ ಸುಳ್ಳೆಂದರೆ ಬಹಳ ಪ್ರೀತಿ. ನೀವು ಸಾಯಕೂಡದ ಜನರನ್ನು ಸಾವಿಗೀಡು ಮಾಡುತ್ತೀರಿ. ಬಂದುಕಕೂಡದ ಜನರನ್ನು ಜೀವಂತವಾಗಿಡುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.’
Kannada BSI Bible 2016
ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಜವೆಗೋದಿಯ ಹಿಡಿಗಳನ್ನೂ ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವದರಿಂದ ಸಾಯದಿರತಕ್ಕವರನ್ನು ಸಾಯಿಸಿ ಸಾಯತಕ್ಕವರನ್ನು ಉಳಿಸಿ ನನ್ನ ಜನರ ನಡುವೆ ನನ್ನ ಘನತೆಗೆ ಕುಂದು ತಂದಿದ್ದೀರಿ.
Kannada Bible (KNCL) BSI 2016
ನೀವು ಹಿಡಿಯುವಷ್ಟೆ ಜವೆಗೋಧಿಗೆ, ಚೂರುಪಾರು ರೊಟ್ಟಿಗೆ ಆಸೆಪಟ್ಟು, ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಜವೆಗೋಧಿಗೂ, ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಗೊಳಿಸುವಿರೋ?