Ezekiel 13:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನರಪುತ್ರನೇ, ನೀನು ಇಸ್ರೇಲಿನ ಪ್ರವಾದಿಗಳಿಗೆ ನನ್ನ ಪರವಾಗಿ ಹೇಳಬೇಕು. ಅವರು ನಿಜವಾಗಿ ನನ್ನ ಪರವಾಗಿ ಮಾತನಾಡುವುದಿಲ್ಲ. ಅವರು ಏನು ಹೇಳಙೇಕೆಂದು ಇಷ್ಟಪಡುತ್ತಾರೋ ಅದನ್ನೆ ಹೇಳುತ್ತಾರೆ. ಅದಕ್ಕಾಗಿ ನೀನು ಅವರ ಕೂಡ ಮಾತನಾಡಿ ಇಂತೆನ್ನಬೇಕು, ‘ಯೆಹೋವನ ಸಂದೇಶವನ್ನು ಕೇಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ಪ್ರವಾದನೆ ಮಾಡಿ, ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು, ‘ಯೆಹೋವನ ವಾಕ್ಯವನ್ನು ಕೇಳಿರಿ.
Kannada BSI Bible 2016
ಮನುಷ್ಯಪುತ್ರನೇ, ಪ್ರವಾದಿ ಸುತ್ತಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ವಿರುದ್ಧ ವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಹೃದಯಗ ಳೊಳಗಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು --ಕರ್ತನ ವಾಕ್ಯವನ್ನು ಕೇಳಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ಪ್ರವಾದನೆಮಾಡಿ ಸ್ವಕಲ್ಪಿತವಾದದ್ದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು - ಯೆಹೋವನ ವಾಕ್ಯವನ್ನು ಕೇಳಿರಿ,
Kannada Bible (KNCL) BSI 2016
“ನರಪುತ್ರನೇ, ಪ್ರವಾದನೆ ಮಾಡಿ ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತ ಹೀಗೆ ಹೇಳು: “ಸರ್ವೇಶ್ವರನ ವಾಕ್ಯವನ್ನು ಕೇಳಿರಿ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನರಪುತ್ರನೇ, ಪ್ರವಾದಿಸುತ್ತಿರುವ ಇಸ್ರಾಯೇಲಿನ ಮನೆತನದ ಪ್ರವಾದಿಗಳಿಗೆ ವಿರುದ್ಧವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಕಲ್ಪನೆಗಳಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು: ‘ಯೆಹೋವ ದೇವರ ವಾಕ್ಯವನ್ನು ಕೇಳಿರಿ;