Ezekiel 13:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ನೀವು ಆ ಬಟ್ಟೆಯ ತೋಳುಪಟ್ಟಿಯನ್ನು ಜನರು ಬೋನಿನಲ್ಲಿ ಸಿಲುಕಿಕೊಳ್ಳುವಂತೆ ಮಾಡುತ್ತೀರಿ. ಆದರೆ ನಾನು ಅವರನ್ನು ಸಬತಂತ್ರರಾಗುವಂತೆ ಮಾಡುವೆನು. ನಿಮ್ಮ ತೋಳಿನಿಂದ ಆ ಪಟ್ಟಿಯನ್ನು ಹರಿದುಹಾಕುವೆನು. ಆಗ ಜನರು ನಿಮ್ಮ ಘಂಧನದಿಂದ ವಿಮುಕ್ತರಾಗುವರು. ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯು ಬಿಡಿಸಿದ ಕೂಡಲೇ ಹಾರಾಡುವಂತೆ ಅವರೂ ಹಾರಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಗಳಿಗೆ ನಾನು ಹೇಸಿ, ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತು ಹಾಕುವೆನು; ನೀವು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವ ಪ್ರಾಣಿಗಳನ್ನು ನಾನು ಬಿಡಿಸಿ, ಪಕ್ಷಿಗಳ ಹಾಗೆ ಸ್ವತಂತ್ರವಾಗಿಸುವೆನು.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಿಮ್ಮ ಪ್ರಾಣಗಳನ್ನು ಹಾರಿಸುವದಕ್ಕಾಗಿ ಬೇಟೆಯಾ ಡುವ ದಂಡುಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಹಾರಿಸುವದಕ್ಕಿರುವ ಬೇಟೆಯಾಡುವ ಪ್ರಾಣಗಳನ್ನು ಬಿಡಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ನಾನು ಹೇಸಿ ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತುಹಾಕುವೆನು; ನೀವು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವ ಪ್ರಾಣಗಳನ್ನು ನಾನು ಬಿಡಿಸಿಬಿಡುವೆನು.
Kannada Bible (KNCL) BSI 2016
ಹೀಗಿರಲು, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಅಕಟಾ! ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ನಾನು ಹೇಸಿ, ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತುಹಾಕುವೆನು; ನೀವು ಬೇಟೆಯಾಡುವ ಪ್ರಾಣಿಗಳನ್ನು ಬಿಡುಗಡೆಮಾಡಿ ಪಕ್ಷಿಗಳ ಹಾಗೆ ಸ್ವತಂತ್ರವಾಗಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಬೇಟೆಯಾಡುವಂತೆ ಬೇಟೆಯಾಡಿದ ಪ್ರಾಣಗಳನ್ನು ಬಿಡಿಸುತ್ತೇನೆ.