Ezekiel 13:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮ್ಮ ಮುಸುಕುಗಳನ್ನು ಹರಿದುಹಾಕುವೆನು. ಮತ್ತು ನಿಮ್ಮ ಹಿಡಿತದಿಂದ ಅವರನ್ನು ಬಿಡಿಸುವೆನು. ಆ ಜನರು ನಿಮ್ಮ ಉರುಲಿನಿಂದ ತಪ್ಪಿಸಿಕೊಳ್ಳುವರು. ಆಗ ನಾನೇ ಒಡೆಯನಾದ ಯೆಹೋವನು ಎಂದು ಗೊತ್ತಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮ್ಮ ಮುಸುಕುಗಳನ್ನೂ ಹರಿದು, ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
Kannada BSI Bible 2016
ನಿಮ್ಮ ವಸ್ತ್ರಗಳನ್ನು ಹರಿದು ಬಿಟ್ಟು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕು ವದಿಲ್ಲ. ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮ ಮುಸುಕುಗಳನ್ನೂ ಹರಿದು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವದಿಲ್ಲ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.
Kannada Bible (KNCL) BSI 2016
ನಾನು ನಿಮ್ಮ ಮುಸುಕುಗಳನ್ನೂ ಹರಿದು, ನನ್ನ ಜನರನ್ನು ನಿಮ್ಮ ಕೈಯಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ; ನಾನೆ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ವಸ್ತ್ರಗಳನ್ನು ಹರಿದು, ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ. ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.