Ezekiel 13:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘“ಪ್ರವಾದಿನಿಯರೇ, ನೀವು ಸುಳ್ಳುಗಾರ್ತಿಯರಾಗಿದ್ದೀರಿ. ನಿಮ್ಮ ಸುಳ್ಳುಗಳು ಒಳ್ಳೆಯವರಿಗೆ ದುಃಖವನ್ನುಟುಮಾಡುವವು. ಒಳ್ಳೆಯ ವ್ಯಕ್ತಿಗಳಿಗೆ ನೋವನ್ನುಟುಮಾಡಲು ನನಗೆ ಮನಸ್ಸಿಲ್ಲ. ದುಷ್ಟ ಜನರು ತಮ್ಮ ದುರ್ಮಾರ್ಗಗಳನ್ನು ತೊರೆದುಬಿಡದಂತೆಯೂ ತಮ್ಮ ಪ್ರಾಣಗಳನ್ನು ರಕ್ಷಿಸಿಕೊಳ್ಳದಂತೆಯೂ ನೀವು ಪ್ರೋತ್ಸಾಹಿಸುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.
Kannada BSI Bible 2016
ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ವ್ಯಥೆಗೊಳಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದರಿಂದಲೂ ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದರಿಂದಲೂ
Kannada Bible (KNCL) BSI 2016
“ನಾನು ಎದೆಗುಂದಿಸದ ಶಿಷ್ಯನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನನ್ನು ಪ್ರೋತ್ಸಾಹಿಸಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಾನು ಯಾವನನ್ನು ದುಃಖಪಡಿಸಲಿಲ್ಲವೋ, ಆ ನೀತಿವಂತರ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು, ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವರನ್ನು ಪ್ರೋತ್ಸಾಹಿಸಿದ್ದೀರಿ.