Ezekiel 13:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗೋಡೆಗಳು ಬಿದ್ದುಹೋದ ಸ್ಥಳಗಳನ್ನು ನೀವು (ಪ್ರವಾದಿಗಳು) ಕಾವಲು ಕಾಯುವದಿಲ್ಲ. ಇಸ್ರೇಲ್ ಜನರಿಗೋಸ್ಕರ ನೀವು ಗೋಡೆಗಳನ್ನು ಕಟ್ಟುವುದಿಲ್ಲ. ಆದ್ದರಿಂದ ಯೆಹೋವನಿಂದ ದಂಡನೆಯ ದಿನವು ಘಂದಾಗ ಜನರು ಯುದ್ಧದಲ್ಲಿ ಸೋತು ಹೋಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿ ಗೋಡೆಯ ಒಡಕುಗಳನ್ನೇರಲಿಲ್ಲ, ಇಸ್ರಾಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಭದ್ರ ಮಾಡಲೂ ಇಲ್ಲ. ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ,
Kannada BSI Bible 2016
ಕರ್ತನ ದಿನದಲ್ಲಿ ಯುದ್ಧಕ್ಕೆ ನಿಲ್ಲ ಬೇಕೆಂದು ಇಸ್ರಾಯೇಲ್ ಮನೆತನದವರಿಗಾಗಿ ಬೇಲಿ ಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರ ಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿಯ ಒಡಕುಗಳನ್ನೇರಲಿಲ್ಲ, ಇಸ್ರಾಯೇಲ್‍ವಂಶದ ರಕ್ಷಣೆಗಾಗಿ ಗೋಡೆಯನ್ನು ಗಟ್ಟಿಮಾಡಲೂ ಇಲ್ಲ.
Kannada Bible (KNCL) BSI 2016
ಸರ್ವೇಶ್ವರನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿಯ ಒಡಕುಗಳನ್ನೇರಲಿಲ್ಲ. ಇಸ್ರಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಗಟ್ಟಿಮಾಡಲೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ಇಸ್ರಾಯೇಲ್ ಮನೆತನದವರ ಸುತ್ತಲೂ ಗೋಡೆಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರಲಿಲ್ಲ.