Ezekiel 13:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“‘ಅವರನ್ನು ಯೆಹೋವನು ಕಳುಹಿಸಿಲ್ಲದಿದ್ದರೂ ಅವರು, ‘ಯೆಹೋವನು ಇದನ್ನು ಹೇಳಿದ್ದಾನೆ’ ಎನ್ನುತ್ತಾರೆ. ಅವರು ಮಾಟಮಂತ್ರ ಮಾಡಿ ಇಂತಿಂಥದ್ದು ಸಂಭವಿಸುವುದು ಎಂದು ಸುಳ್ಳು ಹೇಳುತ್ತಾರೆ. ದೇವರು ನಮ್ಮನ್ನು ಕಳುಹಿಸಿದ್ದು ಎಂದು ಸುಳ್ಳು ಹೇಳುವರು. ಅವರು ತಮ್ಮ ಸುಳ್ಳು ನಿಜವಾಗುತ್ತಿರುವದನ್ನು ನೋಡಲು ಕಾಯುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.
Kannada BSI Bible 2016
ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯುವವರಿಗೆ ಆದ ದರ್ಶನ ವಿುಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವದೆಂದು ಸುಮ್ಮ ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.
Kannada Bible (KNCL) BSI 2016
ಸರ್ವೇಶ್ವರ ಇಂತೆನ್ನುತ್ತಾರೆಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ; ಕೇಳಿಸಿದ ವಾಣಿ ಸುಳ್ಳು; ಸರ್ವೇಶ್ವರ ಅವರನ್ನು ಕಳುಹಿಸಲಿಲ್ಲ. ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರು ಇಂತೆನ್ನುತ್ತಾರೆ,” ಎಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು, ಯೆಹೋವ ದೇವರು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.