Ezekiel 13:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“‘ಎಲೈ ಸುಳ್ಳುಪ್ರವಾದಿಗಳೇ, ನೀವು ನೋಡಿದ ದರ್ಶನಗಳು ಸತ್ಯವಾದವುಗಳಲ್ಲ. ನೀವು ಮಂತ್ರತಂತ್ರ ಮಾಡಿ ಇಂತಿಂಥದ್ದು ಸಂಭವಿಸುವುದು ಎಂದು ಸುಳ್ಳು ಹೇಳಿದ್ದೀರಿ. ನಾನು ಮಾತಾಡಿಲ್ಲದಿದ್ದರೂ ಯೆಹೋವನೇ ಇದನ್ನು ಹೇಳಿದನೆಂದು ನೀವು ಹೇಳುತ್ತೀರಿ.’“
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಮಾತನಾಡದೆ ಹೋದರೂ, ‘ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನವು ಮಿಥ್ಯ, ನೀವು ಹೇಳಿದ ಕಣಿಯು ಸುಳ್ಳು.
Kannada BSI Bible 2016
ವ್ಯರ್ಥ ದರ್ಶನವನ್ನು ನೋಡಿರುವಿ ರಲ್ಲಾ. ಸುಳ್ಳಾದ ಭವಿಷ್ಯವನ್ನು ಹೇಳಿದ್ದೀರಲ್ಲಾ. ನಾನು ಮಾತನಾಡದೆ ಇದ್ದರೂ--ಕರ್ತನೇ ಹೇಳಿದನೆಂದು ಹೇಳಿದ್ದಿರಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಮಾತಾಡದೆಹೋದರೂ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನವು ವಿುಥ್ಯ, ನೀವು ಹೇಳಿದ ಕಣಿಯು ಸುಳ್ಳು.
Kannada Bible (KNCL) BSI 2016
ನಾನು ಮಾತಾಡದೆ ಇದ್ದರೂ ‘ಸರ್ವೇಶ್ವರ ಇಂತೆನ್ನುತ್ತಾರೆ’ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನ ಮಿಥ್ಯ, ನೀವು ಹೇಳಿದ ಭವಿಷ್ಯ ಸುಳ್ಳು.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಮಾತಾಡದೇ ಇದ್ದರೂ, “ಯೆಹೋವ ದೇವರು ಇಂತೆನ್ನುತ್ತಾರೆ,” ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನ ಮಿಥ್ಯ, ನೀವು ಹೇಳಿದ ಕಣಿಯು ಸುಳ್ಳು.