Ezekiel 13:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಈಗ ನನ್ನ ಒಡೆಯನಾದ ಯೆಹೋವನು ನಿಜವಾಗಿಯೂ ಮಾತನಾಡುವನು. ಆತನು ಹೇಳುವುದೇನೆಂದರೆ, “ನೀವು ಸುಳ್ಳು ಹೇಳಿದ್ದೀರಿ, ನೀವು ಸುಳ್ಳುದರ್ಶನಗಳನ್ನು ನೋಡಿದ್ದೀರಿ. ಆದ್ದರಿಂದ ನಾನು ನಿಮಗೆ ವಿರುದ್ಧವಾಗಿದ್ದೇನೆ.” ಇದು ನನ್ನ ಒಡೆಯನಾದ ಯೆಹೋವನು ಹೇಳಿದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀವು ವ್ಯರ್ಥವಾದದ್ದನ್ನು ನುಡಿದು, ಸುಳ್ಳಾದ ದರ್ಶನವನ್ನು ಕಂಡಿದ್ದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ’ ಇದು ಕರ್ತನಾದ ಯೆಹೋವನೆಂಬ ನನ್ನ ನುಡಿ.
Kannada BSI Bible 2016
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ವ್ಯರ್ಥವಾಗಿ ಮಾತನಾಡಿದ್ದರಿಂದಲೂ ಸುಳ್ಳನ್ನು ಕಂಡದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ವ್ಯರ್ಥವಾದದ್ದನ್ನು ನುಡಿದು ಸುಳ್ಳಾದದ್ದನ್ನು ಕಂಡದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ, ಇದು ಕರ್ತನಾದ ಯೆಹೋವನೆಂಬ ನನ್ನ ನುಡಿ.
Kannada Bible (KNCL) BSI 2016
ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನೀವು ವ್ಯರ್ಥವಾದುದನ್ನು ನುಡಿದು ಸುಳ್ಳಾದುದನ್ನು ಕಂಡದ್ದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ, ಇದು ಸರ್ವೇಶ್ವರನಾದ ದೇವರೆಂಬ ನನ್ನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಸುಳ್ಳಾಗಿ ಮಾತನಾಡಿದ್ದರಿಂದಲೂ, ಸುಳ್ಳನ್ನು ದರ್ಶಿಸಿದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನು. ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.