Ezekiel 13:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೇಳುವುದೇನೆಂದರೆ, “ಯಾವ ಪ್ರವಾದಿಗಳು ಸುಳ್ಳುದರ್ಶನವನ್ನು ನೋಡಿ ಸುಳ್ಳನ್ನು ಹೇಳಿದ್ದಾರೋ, ಅವರನ್ನು ಶಿಕ್ಷಿಸುವೆನು. ನನ್ನ ಜನರ ಮಧ್ಯೆಯಿಂದ ಅವರನ್ನು ತೆಗೆದುಬಿಡುವೆನು. ಅವರ ಹೆಸರುಗಳು ಇಸ್ರೇಲರ ವಂಶಾವಳಿ ಪಟ್ಟಿಯಲ್ಲಿ ಇರುವುದಿಲ್ಲ. ಅವರು ಇಸ್ರೇಲ್ ದೇಶಕ್ಕೆ ಹಿಂದಿರುಗಿ ಬರುವುದಿಲ್ಲ. ನಾನೇ ಒಡೆಯನಾದ ಯೆಹೋವನೆಂದು ಆಗ ನಿಮಗೆ ಗೊತ್ತಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಮಿಥ್ಯ ದರ್ಶನಹೊಂದಿ, ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರೀಸಭೆಯಲ್ಲಿ ಸೇರಬಾರದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗಬಾರದು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.
Kannada BSI Bible 2016
ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿುಥ್ಯಾದರ್ಶನ ಹೊಂದಿ ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈ ಮಾಡುವೆನು; ಅವರು ನನ್ನ ಜನರ ಹಿರೀ ಸಭೆಯಲ್ಲಿ ಸೇರಕೂಡದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗವು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವದು.
Kannada Bible (KNCL) BSI 2016
ಮಿಥ್ಯದರ್ಶನ ಹೊಂದಿ ಸುಳ್ಳು ಭವಿಷ್ಯ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರಿಯ ಸಭೆಯಲ್ಲಿ ಸೇರಕೂಡದು, ಇಸ್ರಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರು ಲಿಖಿತವಾಗಬಾರದು, ಅವರು ಇಸ್ರಯೇಲ್ ನಾಡನ್ನು ಪ್ರವೇಶಿಸಲೂಬಾರದು. ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಳ್ಳಾದದ್ದನ್ನು ದರ್ಶಿಸಿ, ಸುಳ್ಳು ಕಣಿ ಹೇಳುವ ಪ್ರವಾದಿಗಳಿಗೆ ವಿರುದ್ಧವಾಗಿ ನನ್ನ ಹಸ್ತವಿರುವುದು. ಅವರು ನನ್ನ ಜನರ ಸಭೆಯಲ್ಲಿ ಇರುವುದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲಾಗುವುದೂ ಇಲ್ಲ. ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವುದೂ ಇಲ್ಲ. ಆಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.