Ezekiel 14:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಇಸ್ರೇಲಿನ ಜನರು ಇನ್ನೆಂದಿಗೂ ನನ್ನ ನಾಯಕತಬವನ್ನು ತೊರೆದು ಅಲೆದಾಡುವದಿಲ್ಲ. ಹೀಗೆ, ಅವರು ತಮ್ಮ ದಂಗೆಕೋರತನದ ಮಾರ್ಗಗಳಿಂದ ಇನ್ನೆಂದಿಗೂ ತಮ್ಮನ್ನು ಅಪವಿತ್ರರನ್ನಾಗಿ ಮಾಡಿಕೊಳ್ಳುವುದಿಲ್ಲ. ಆಗ ಅವರು ನಿಜವಾಗಿಯೂ ನನ್ನ ಜನರಾಗಿರುವರು ಮತ್ತು ನಾನು ಅವರ ದೇವರಾಗಿರುವೆನು.”‘ ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯುವುದಿಲ್ಲ, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವುದಿಲ್ಲ; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವ ದರಿಂದ ಅವರು ನನ್ನ ಜನರಾಗಿರುವರು ಅವರಿಗೆ ನಾನು ದೇವರಾಗಿರುವೆನು, ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯರು, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆಮಾಡಿಕೊಳ್ಳರು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು, ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ಹೀಗಾದರೆ ಇಸ್ರಯೇಲ್ ವಂಶದವರು ಇನ್ನು ನನ್ನನ್ನು ತೊರೆಯರು, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆಮಾಡಿಕೊಳ್ಳರು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿ ಇರುವೆನು; ಇದು ಸರ್ವೇಶ್ವರನಾದ ದೇವರ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ, ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವುದರಿಂದ ಅವರು ನನ್ನ ಜನರಾಗಿರುವರು, ಅವರಿಗೆ ನಾನು ದೇವರಾಗಿರುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”