Ezekiel 14:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಘನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಘಹುದಾಗಿತ್ತು.” ಇದು ನನ್ನ ಒಡೆಯನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಹ, ದಾನಿಯೇಲ, ಯೋಬ ಎಂಬುವರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಗನನ್ನಾಗಲಿ, ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ನೋಹ ದಾನಿ ಯೇಲ ಯೋಬ ಎಂಬವರು ಅದರಲ್ಲಿದ್ದಾಗ್ಯೂ ಅವರು ಮಗನನ್ನಾದರೂ ಮಗಳನ್ನಾದರೂ ತಪ್ಪಿಸದೆ ನನ್ನ ಜೀವ ದಾಣೆ, ತಮ್ಮ ಪ್ರಾಣಗಳನ್ನು ಮಾತ್ರ ನೀತಿಯಿಂದ ತಪ್ಪಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೊಹ ದಾನಿಯೇಲ ಯೋಬ ಎಂಬಿವರು ಅದರಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಗನನ್ನಾಗಲೀ ಹೆಣ್ಣುಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ನೋಹ, ದಾನಿಯೇಲ, ಯೋಬ, ಎಂಬವರು ಅದರಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಗನನ್ನಾಗಲಿ ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೋಹನೂ, ದಾನಿಯೇಲನೂ, ಯೋಬನೂ ಅದರಲ್ಲಿದ್ದರೂ ನನ್ನ ಜೀವದಾಣೆ, ಅವರು ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.