Ezekiel 14:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಆಶ್ಚರ್ಯಕರವಾಗಿ, ಕೆಲವರು ಅದರಲ್ಲಿ ಉಳಿದುಕೊಳ್ಳುವರು, ಪುತ್ರಪುತ್ರಿಯರನ್ನು ನಿಮ್ಮ ಬಳಿಗೆ ಜೀವಂತವಾಗಿ ತರಲಾಗುವುದು. ಆ ಜನರು ಎಷ್ಟು ದುಷ್ಟರೆಂಬುದನ್ನು ಸಬತಃ ನೀವೇ ಅರ್ಥಮಾಡಿಕೊಳ್ಳುವಿರಿ. ನಾನು ಜೆರುಸಲೇಮಿನ ಮೇಲೆ ಬರಮಾಡಿದ ಇಡೀ ಆಪತ್ತಿನ ಬಗ್ಗೆ ನೀವು ಘಹಳವಾಗಿ ನೊಂದುಕೊಳ್ಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ.
Kannada BSI Bible 2016
ಆದಾಗ್ಯೂ ಇಗೋ, ಅದರಲ್ಲಿ ಕುಮಾರ ಕುಮಾರ್ತೆಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲ್ಪಡುವರು. ಇಗೋ, ಅವರು ನಿಮ್ಮ ಬಳಿಗೆ ಬಂದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ನಾನು ಅವರ ಮೇಲೆ ತಂದ ಎಲ್ಲವುಗಳ ವಿಷಯವಾಗಿಯೂ ಸಮಾಧಾನ ಹೊಂದು ವಿರಿ.ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇವಿುನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿಯೂ ಸಮಾಧಾನ ಹೊಂದುವಿರಿ.
Kannada Bible (KNCL) BSI 2016
ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಅವರು ನಿಮ್ಮ ಬಳಿ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು, ನಾನು ಜೆರುಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ ಅದಕ್ಕೆ ಉಂಟುಮಾಡಿದ ಎಲ್ಲ ಕೇಡುಗಳ ವಿಷಯವಾಗಿ, ಸಮಾಧಾನ ಹೊಂದುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಅದರಲ್ಲಿ ಪುತ್ರಪುತ್ರಿಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲಾಗುವರು. ಅವರು ನಿಮ್ಮ ಬಳಿಗೆ ಬಂದಾಗ, ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ಸಮಾಧಾನ ಹೊಂದುವಿರಿ.