Ezekiel 14:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಜೀವಿಸುವ ರೀತಿ, ದುಷ್ಟತನವನ್ನು ನಡಿಸುವ ರೀತಿಯನ್ನು ನೀವು ನೋಡುವಿರಿ. ಆಗ ನಾನು ಯಾಕೆ ಅವರನ್ನು ಶಿಕ್ಷಿಸುತ್ತೇನೆಂದು ನಿಮಗೆ ಗೊತ್ತಾಗುವದು.” ಇದು ನನ್ನ ಒಡೆಯನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಯೆರೂಸಲೇವಿುಗೆ ಮಾಡಿದ್ದೆಲ್ಲಾ ಸುಮ್ಮನೆ ಮಾಡಿದ್ದಲ್ಲವೆಂದು ನಿಮಗೆ ತಿಳಿದುಬರುವದು; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಜೆರುಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ಆಗ ತಿಳಿಯುವುದು. ಇದು ಸರ್ವೇಶ್ವರನಾದ ದೇವರ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಅವರ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಅದರೊಳಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”