Ezekiel 14:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನರಪುತ್ರನೇ, ಈ ಜನರು ತಮ್ಮ ವಿಗ್ರಹಗಳಿಗೆ ಪ್ರತಿಷ್ಠಿತರಾಗಿದ್ದಾರೆ ಮತ್ತು ಪಾಪಕ್ಕೆ ಬೀಳಲು ತಮಗೆ ತಾವೇ ಅವಕಾಶಮಾಡಿಕೊಡುತ್ತಾರೆ. ಸಹಾಯಕ್ಕಾಗಿ ನನ್ನನ್ನು ಕೇಳಿಕೊಳ್ಳಲು ಅವರಿಗೆ ಅವಕಾಶ ಕೊಡಙೇಕೇ? ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.”
Kannada BSI Bible 2016
ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ಇವರು ತಮ್ಮ ಬೊಂಬೆಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ ತಮಗೆ ಪಾಪಕಾರಿಯಾದ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವದು ಯುಕ್ತವೋ? ಎಂದಿಗೂ ಅಲ್ಲ.
Kannada Bible (KNCL) BSI 2016
“ನರಪುತ್ರನೇ, ಈ ಜನರು ವಿಗ್ರಹಗಳನ್ನು, ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೆ. ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಅಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ಈ ಮನುಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ, ತಮ್ಮ ಅಕ್ರಮವಾದ ವಿಘ್ನಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವೆಲ್ಲವುಗಳಿಗಾಗಿ ನಾನು ಅವರನ್ನು ವಿಚಾರಿಸಬೇಕೇ?