Ezekiel 14:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ ನಾನು ಅವರ ಹೃದಯಗಳನ್ನು ಪರಿವರ್ತಿಸಬೇಕು. ಅವರು ನನ್ನನ್ನು ತೊರೆದು ಹೊಲಸು ವಿಗ್ರಹಗಳನ್ನು ಪೂಜಿಸಿದರೂ ನಾನು ಅವರನ್ನು ಪ್ರೀತಿಸುತ್ತೇನೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು. ಇದೇ ನನ್ನ ಉದ್ದೇಶ’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.”
Kannada BSI Bible 2016
ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ಬೊಂಬೆಗಳ ನಿವಿುತ್ತ ನನ್ನನ್ನು ತೊರೆದದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲಿ ಸಿಕ್ಕಿಸಿ ಹಿಡಿಯುವೆನು.
Kannada Bible (KNCL) BSI 2016
ಇಸ್ರಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದ್ದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ವಿಗ್ರಹಗಳಿಗಾಗಿ ನನ್ನನ್ನು ತೊರೆದ ಇಸ್ರಾಯೇಲ್ ಜನರ ಹೃದಯಗಳನ್ನು ಪುನಃ ವಶಪಡಿಸಿಕೊಳ್ಳಲು ನಾನು ಇದನ್ನು ಮಾಡುತ್ತೇನೆ.’