Ezekiel 14:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದ್ದರಿಂದ ಇಸ್ರೇಲ್ ಜನರಿಗೆ ಈ ವಿಷಯವನ್ನು ತಿಳಿಸು. ಅವರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ನಿಮ್ಮ ಹೊಲಸು ವಿಗ್ರಹಗಳನ್ನು ತೊರೆದುಬಿಟ್ಟು ನನ್ನ ಬಳಿಗೆ ಹಿಂತಿರುಗಿರಿ. ಆ ಭಯಂಕರ ಸುಳ್ಳು ದೇವರಿಂದ ತೊಲಗಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿ, ನಿಮ್ಮ ಎಲ್ಲಾ ಅಸಹ್ಯ ವಸ್ತುಗಳ ಕಡೆಗೆ ಬೆನ್ನುಮಾಡಿರಿ.
Kannada BSI Bible 2016
ಇಸ್ರಾಯೇಲಿನ ಮನೆತನದವರಿಗೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮಾನ ಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾ ಗಿಯೇ ತಿರುಗಿ ಕೊಳ್ಳಿರಿ; ನಿಮ್ಮ ಅಸಹ್ಯವಾದವುಗಳ ನ್ನೆಲ್ಲಾ ಬಿಟ್ಟು ನಿಮ್ಮ ಮುಖಗಳನ್ನು ತಿರುಗಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ನಿಮ್ಮ ಬೊಂಬೆಗಳನ್ನು ತೊರೆದುಬಿಟ್ಟು ಹಿಂದಿರುಗಿರಿ, ನಿಮ್ಮ ಎಲ್ಲಾ ಅಸಹ್ಯವಸ್ತುಗಳ ಕಡೆಗೆ ಬೆನ್ನುಮಾಡಿರಿ.
Kannada Bible (KNCL) BSI 2016
“ಆದಕಾರಣ ನೀನು ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿರಿ; ನಿಮ್ಮ ಎಲ್ಲಾ ಅಸಹ್ಯವಸ್ತುಗಳ ಕಡೆಗೆ ಬೆನ್ನುಮಾಡಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮಾನಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾಗಿಯೇ ತಿರುಗಿಕೊಳ್ಳಿರಿ. ನಿಮ್ಮ ಅಸಹ್ಯವಾದವುಗಳನ್ನೆಲ್ಲಾ ಬಿಟ್ಟು, ನಿಮ್ಮ ಮುಖಗಳನ್ನು ತಿರುಗಿಸಿರಿ.