Ezekiel 14:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನಾದ ನಾನೇ ಸಬತಃ ಪ್ರತಿಯೊಬ್ಬನಿಗೂ ಉತ್ತರಿಸುವೆನು ಅಂದರೆ ಅವನು ತನ್ನನ್ನು ಪಾಪಕ್ಕೆ ಬೀಳಿಸುವ ವಿಗ್ರಹಗಳನ್ನು ಹೊಂದಿದ್ದರೂ ಆ ವಿಗ್ರಹಗಳನ್ನು ಪೂಜಿಸುತ್ತಿದ್ದರೂ ಮತ್ತು ನನ್ನಿದ ತನ್ನನ್ನು ಙೇರ್ಪಡಿಸಿಕೊಳ್ಳುತ್ತಿದ್ದರೂ ನನ್ನ ಉಪದೇಶಕ್ಕಾಗಿ ನನ್ನ ಬಳಿಗೆ ಘಂದರೆ ಅವನು ಇಸ್ರೇಲನಾಗಿದ್ದರೂ ಇಸ್ರೇಲಿನಲ್ಲಿ ವಾಸವಾಗಿರುವ ಪರದೇಶಿಯಾಗಿದ್ದರೂ ನಾನು ಶಾಪವೆಂಘ ಉತ್ತರ ಕೊಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.
Kannada BSI Bible 2016
ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಕಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ಅಗಲಿ ತನ್ನ ಬೊಂಬೆಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಟ್ಟು
Kannada Bible (KNCL) BSI 2016
“ಏಕೆಂದರೆ ಇಸ್ರಯೇಲ್ ವಂಶದವರಲ್ಲಾಗಲಿ ಇಸ್ರಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ ಅವನಿಗೆ ಸರ್ವೇಶ್ವರನಾದ ನಾನೇ ಉತ್ತರಕೊಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಇಸ್ರಾಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ, ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ, ಯೆಹೋವ ದೇವರಾದ ನಾನೇ ಉತ್ತರಕೊಡುವೆನು.