Ezekiel 15:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದ್ರಾಕ್ಷಾಘಳ್ಳಿಯ ಕಟ್ಟಿಗೆಯಿಂದ ಏನನ್ನಾದರೂ ತಯಾರಿಸಘಹುದೋ? ಇಲ್ಲ. ಅದನ್ನು ಗೂಟವನ್ನಾಗಿ ಮಾಡಿ ಅದರಲ್ಲಿ ಪಾತ್ರೆಗಳನ್ನು ತೂಗುಹಾಕಘಹುದೋ? ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ದ್ರಾಕ್ಷಿಯ ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವ ವಸ್ತುವನ್ನಾದರೂ ನೇತು ಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?
Kannada BSI Bible 2016
ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ? ಅಥವಾ ಅದರ ಮೇಲೆ ಯಾವ ಸಾಮಗ್ರಿಯನನ್ನಾದರೂ ನೇತುಹಾಕು ವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ರಾಕ್ಷೆಯ ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವದನ್ನಾದರೂ ಮಾಡುವರೋ? ಯಾವ ಸಾಮಾನನ್ನಾದರೂ ತಗಲಿಹಾಕುವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?
Kannada Bible (KNCL) BSI 2016
ದ್ರಾಕ್ಷಿಯ ಕಟ್ಟಿಗೆಯನ್ನು ಬಳಸಿ ಮಾಡುತ್ತಾರೆಯೆ ಏನನ್ನಾದರು? ಸಾಮಗ್ರಿಗಳನ್ನು ತಗಲಿಹಾಕಲು ಅದರಿಂದ ಮಾಡುತ್ತಾರೆಯೇ ಗೂಟವನ್ನಾದರು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರಿಂದ ಕಟ್ಟಿಗೆಯನ್ನು ತೆಗೆದುಕೊಂಡು ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವನನ್ನಾದರೂ ನೇತುಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?