Ezekiel 15:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದ್ರಾಕ್ಷಿಬಳ್ಳಿಯು ಕಾಡಿನ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ, ಬೆಂಕಿಗೆ ಙೇಕಾದ ಇಂಧನಕ್ಕಾಗಿ ನಾನು ಅದರ ಕಟ್ಟಿಗೆಯನ್ನು ನೇಮಿಸಿದ್ದೇನೆ. ಇದೇ ಕೆಲಸವನ್ನು ಜೆರುಸಲೇಮಿನ ನಿವಾಸಿಗಳಿಗೂ ನಾನು ನೇಮಿಸಿದ್ದೇನೆ.” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವನ ವೃಕ್ಷಗಳಲ್ಲಿ ದ್ರಾಕ್ಷಿಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯನ್ನಾಗಿ ಕೊಟ್ಟಿದ್ದೇನೋ, ಹಾಗೆಯೇ ನಾನು ಯೆರೂಸಲೇಮಿನವರನ್ನು ವಿನಾಶಕ್ಕೆ ಗುರಿಮಾಡಿದ್ದೇನೆ.
Kannada BSI Bible 2016
ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ವನವೃಕ್ಷಗಳಲ್ಲಿ ದ್ರಾಕ್ಷೆಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯಾಗಿ ಕೊಟ್ಟಿದ್ದೇನೋ ಹಾಗೆಯೇ ನಾನು ಯೆರೂಸಲೇವಿುನವರನ್ನು [ನಾಶನಕ್ಕೆ] ಕೊಟ್ಟಿದ್ದೇನೆ.
Kannada Bible (KNCL) BSI 2016
ಇಂತಿರಲು ಸರ್ವೇಶ್ವರನಾದ ದೇವರು ಹೇಳುವುದಿದು: “ವನವೃಕ್ಷಗಳಲ್ಲಿ ದ್ರಾಕ್ಷಾವೃಕ್ಷವನ್ನೆ ಅಗ್ನಿಗೆ ನಾನು ಸೌದೆಯನ್ನಾಗಿಸಿರುವಂತೆ ಕೊಟ್ಟಿರುವೆನು ಜೆರುಸಲೇಮನ್ನು ವಿನಾಶಕ್ಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ವನವೃಕ್ಷಗಳಲ್ಲಿ ದ್ರಾಕ್ಷಿಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಯಾಗಿ ಮಾಡಿರುವೆನೋ ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ವಿನಾಶಕ್ಕೆ ಗುರಿಮಾಡಿದ್ದೇನೆ.