Ezekiel 15:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ಅವರನ್ನು ದಂಡಿಸುವೆನು. ಅವರು ಒಂದು ಬೆಂಕಿಯಿಂದ ತಪ್ಪಿಸಿಕೊಂಡರೂ ಮತ್ತೊಂದು ಬೆಂಕಿಯಿಂದ ಸುಟ್ಟುಹೋಗುವರು. ನಾನು ಅವರನ್ನು ದಂಡಿಸಿದಾಗ, ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
Kannada BSI Bible 2016
ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಮೇಲೆ ಕೋಪದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ ಬೆಂಕಿಯು ಅವರನ್ನು ನುಂಗಿಬಿಡುವದು; ನಾನು ಅವರ ಮೇಲೆ ಕೋಪದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.
Kannada Bible (KNCL) BSI 2016
ನಾನವರ ಮೇಲಿಡುವೆನು ಕೋಪ ದೃಷ್ಟಿಯನ್ನು; ಬೆಂಕಿಯಿಂದ ತಪ್ಪಿಸಿಕೊಂಡರೂ ನುಂಗಿಬಿಡುವುದು ಅದು ಅವರನ್ನು. ನಾನವರ ಮೇಲೆ ಕೋಪ ದೃಷ್ಟಿಯನ್ನಿಟ್ಟಾಗ ನಾನೇ ಸರ್ವೇಶ್ವರನೆಂದು ನಿಮಗೆ ಮನದಟ್ಟಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಬೆಂಕಿಯೊಳಗಿಂದ ಹೊರಗೆ ಬಂದು ತಪ್ಪಿಸಿಕೊಂಡರೂ, ಮತ್ತೊಂದು ಬೆಂಕಿಯು ಅವರನ್ನು ದಹಿಸಿಬಿಡುವುದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ, ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.