Ezekiel 16:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನಗೆ ಅಂದವಾದ ಉಡುಪನ್ನು ಕೊಟ್ಟು ಕಾಲಿಗೆ ನಯವಾದ ಚರ್ಮದ ಕೆರಗಳನ್ನು ಕೊಟ್ಟೆನು. ನಿನ್ನ ತಲೆಗೆ ನಾರುಮಡಿಯ ತಲೆಕಟ್ಟನ್ನು ಕೊಟ್ಟೆನು ಮತ್ತು ನಿನಗೆ ರೇಷ್ಮೆಯ ಬಟ್ಟೆಯನ್ನು ಹೊದಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲಪ್ರಾಣಿಯ ಕೆಂಪು ಚರ್ಮದ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರು ಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.
Kannada BSI Bible 2016
ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ ಕಡಲುಹಂದಿಯ ತೊಗಲಿನ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ ನಯವಾದ ನಾರುಮಡಿಯನ್ನು ನಿನಗೆ ಉಡಿಸಿ ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.
Kannada Bible (KNCL) BSI 2016
ಇದಲ್ಲದೆ ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲು ಹಂದಿಯ ತೊಗಲಿನ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರುಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲುಹಂದಿಯ ತೊಗಲಿನ ಪಾದರಕ್ಷೆಗಳನ್ನು ಕೊಟ್ಟೆನು. ನಯವಾದ ನಾರುಮಡಿಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು;