Ezekiel 16:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೌದು, ನೀನು ನಿನ್ನ ಸಂಪೂರ್ಣವಾದ ಸೌಂದರ್ಯಕ್ಕಾಗಿ ಜನಾಂಗಗಳ ಮಧ್ಯದಲ್ಲಿ ಹೆಸರು ವಾಸಿಯಾಯಿತು. ಯಾಕೆಂದರೆ ನಾನು ನಿನ್ನನ್ನು ಅತ್ಯಂತ ಸೌಂದರ್ಯವತಿಯನ್ನಾಗಿ ಮಾಡಿದೆನು.’“ ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯವು ಪರಿಪೂರ್ಣವಾಯಿತು; ನಿನ್ನ ಚೆಲುವು ಹೆಸರುವಾಸಿಯಾಗಿ ಜನಾಂಗಗಳಲ್ಲಿ ಹಬ್ಬಿತು” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಇದಲ್ಲದೆ, ನಿನ್ನ ಸೌಂದ ರ್ಯದಿಂದ ನಿನ್ನ ಕೀರ್ತಿಯು ಅನ್ಯಜನಾಂಗಗಳಲ್ಲಿ ಹಬ್ಬಿತು; ಯಾಕಂದರೆ ನಾನು ನಿನ್ನ ಮೇಲೆ ಇಟ್ಟ ಸಂಪೂರ್ಣ ವೈಭವದಿಂದಲೇ ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯವು ಪರಿಪೂರ್ಣವಾಯಿತು; ನಿನ್ನ ಚೆಲುವಿಕೆಯ ಹೆಸರುವಾಸಿಯು ಜನಾಂಗಗಳಲ್ಲಿ ಹಬ್ಬಿತು; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ನಾನು ನಿನಗೆ ಅನುಗ್ರಹಿಸಿದ ನಿನ್ನ ವೈಭವದಿಂದ ನಿನ್ನ ಸೌಂದರ್ಯ ಪರಿಪೂರ್ಣವಾಯಿತು; ನಿನ್ನ ಚೆಲುವು ಜನಾಂಗಗಳಲ್ಲಿ ಪ್ರಸಿದ್ಧವಾಯಿತು; ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯ ಪರಿಪೂರ್ಣವಾಯಿತು; ನಿನ್ನ ಚೆಲುವು ಜನಾಂಗಗಳಲ್ಲಿ ಪ್ರಸಿದ್ಧವಾಯಿತು, ಇದು ಸಾರ್ವಭೌಮ ಯೆಹೋವ ದೇವರ ನುಡಿ.