Ezekiel 16:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಹೀಗೆಂದನು: “ನೀನು ನಿನ್ನ ಸೌಂದರ್ಯದ ಮೇಲೆ ಭರವಸೆ ಉಳ್ಳವಳಾಗಿದ್ದೆ. ನಿನ್ನ ಪ್ರಖ್ಯಾತಿಯಿಂದಾಗಿ ನನಗೆ ಅಪನಂಬಿಗಸ್ತಳಾದಿ. ನಿನ್ನನ್ನು ಹಾದುಹೋಗುವ ಪ್ರತಿವ್ಯಕ್ತಿಯೊಂದಿಗೆ ನೀನು ವೇಶ್ಯೆಯಂತೆ ನಡೆದುಕೊಂಡಿ. ನೀನು ನಿನ್ನನ್ನು ಅವರಿಗೊಪ್ಪಿಸಿದಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು, ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ವ್ಯಭಿಚಾರಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರಮಾಡಿದೆ, ಪ್ರತಿಯೊಬ್ಬನ ಸಂಗಡ ವ್ಯಭಿಚಾರಕ್ಕೆ ಒಳಗಾದೆ.
Kannada BSI Bible 2016
ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ಸೂಳೆತನಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ವಿುತಿಮೀರಿ ಹಾದರಮಾಡಿದಿ, ಒಬ್ಬೊಬ್ಬನಿಗೂ ಒಳಗಾದಿ.
Kannada Bible (KNCL) BSI 2016
“ಆದರೆ ನೀನು ನಿನ್ನ ಸೌಂದರ್ಯವನ್ನೇ ನೆಚ್ಚಿಕೊಂಡೆ, ‘ನಾನು ಪ್ರಸಿದ್ಧಳಾದೆ’ ಎಂದು ಉಬ್ಬಿಕೊಂಡು ಸೂಳೆತನಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ಹಾದರಮಾಡಿದೆ. ಒಬ್ಬೊಬ್ಬನಿಗೂ ಒಳಗಾದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸೆಯಿಟ್ಟು, ನಿನ್ನ ಕೀರ್ತಿಯ ನಿಮಿತ್ತವಾಗಿ ವೇಶ್ಯೆಯಾದೆ. ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರ ಮಾಡಿದೆ ಮತ್ತು ನಿನ್ನ ಸೌಂದರ್ಯ ಅವನದಾಯಿತು.