Ezekiel 16:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಹೇಳಿದ್ದೇನೆಂದರೆ, “ನನ್ನ ಮಕ್ಕಳಾಗಿದ್ದ ನಿನ್ನ ಪುತ್ರಪುತ್ರಿಯರನ್ನು ನೀನು ತೆಗೆದುಕೊಂಡು ಅವರನ್ನು ಆಹಾರವನ್ನಾಗಿ ವಿಗ್ರಹಗಳಿಗೆ ಯಜ್ಞ ಅರ್ಪಿಸಿದೆ. ನಿನ್ನ ಸೂಳೆತನವು ಸಾಕಾಗಿರಲಿಲ್ಲವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದಲ್ಲದೆ ನೀನು ನನಗೆ ಹೆತ್ತ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞಮಾಡಿದೆ. ನಿನ್ನ ವ್ಯಭಿಚಾರವು ಅಲ್ಪಕಾರ್ಯವೆಂದು ಭಾವಿಸಿದಿಯೋ?
Kannada BSI Bible 2016
ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ,
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನೀನು ನನಗೆ ಹೆತ್ತ ಗಂಡು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಅಹಾರವಾಗಲೆಂದು ಯಜ್ಞಮಾಡಿದಿ.
Kannada Bible (KNCL) BSI 2016
“ಇದಲ್ಲದೆ ನೀನು ನನಗೆ ಹೆತ್ತ ಗಂಡು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞವಾಗಿ ಅರ್ಪಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇದಾದ ಮೇಲೆ ನನಗೆ ಹುಟ್ಟಿದ ನನ್ನ ಪುತ್ರರನ್ನೂ, ಪುತ್ರಿಯರನ್ನೂ ವಿಗ್ರಹಗಳ ಆಹಾರಕ್ಕಾಗಿ ಯಜ್ಞವಾಗಿ ಅರ್ಪಿಸಿದೆ. ಈ ನಿನ್ನ ವ್ಯಭಿಚಾರ ಸಾಕಾಗಲಿಲ್ಲವೋ?