Ezekiel 16:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತೀ ರಸ್ತೆಯ ಪ್ರಾರಂಭದಲ್ಲಿ ಅಂಥಾ ಪೂಜಾಸ್ಥಳಗಳನ್ನು ನಿರ್ಮಿಸಿದ್ದೀ. ನೀನು ನಿನ್ನ ಸೌಂದರ್ಯವನ್ನು ಹಾಳುಮಾಡಿಕೊಂಡಿ. ನೀನು ಅಸಹ್ಯವಾದ ಕಾರ್ಯಗಳನ್ನು ಮಾಡಲು ನಿನ್ನ ಸೌಂದರ್ಯವನ್ನು ಘಳಸಿಕೊಂಡೆ. ಹಾದಿಯಲ್ಲಿ ಹೋಗುವ ಪ್ರತಿಯೊಬ್ಬ ಗಂಡಸಿಗೂ ನೀನು ಲೈಂಗಿಕ ತೃಪ್ತಿ ನೀಡಿ ನಿನ್ನ ಸೂಳೆತನವನ್ನು ಹೆಚ್ಚಿಸಿಕೊಂಡೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚ ಕೆಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನು ಸೇರಿಸಿ ವ್ಯಭಿಚಾರವನ್ನು ಹೆಚ್ಚಾಗಿ ನಡೆಸಿರುವೆ.
Kannada BSI Bible 2016
ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಜಗಲಿಯನ್ನು ಕಟ್ಟಿಕೊಂಡು ನಿನ್ನ ಸೌಂದರ್ಯವನ್ನು ನೀಚ ಕೆಲಸಕ್ಕೆ ಒಪ್ಪಿಸಿ ಹಾದುಹೋಗುವವರೆಲ್ಲರನ್ನು ಸೇರಿ ಸೂಳೆತನವನ್ನು ಹೆಚ್ಚಾಗಿ ನಡಿಸಿದ್ದೀ.
Kannada Bible (KNCL) BSI 2016
ಒಂದೊಂದು ಬೀದಿಯ ಕೊನೆಯಲ್ಲಿ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚಕೆಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನೂ ಸೇರಿ ಸೂಳೆತನವನ್ನು ಅಧಿಕಗೊಳಿಸಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿಯೊಂದು ದಾರಿಯ ಕೊನೆಯಲ್ಲಿಯೂ ಎತ್ತರದ ದೇವಾಲಯವನ್ನು ನಿರ್ಮಿಸಿ, ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು, ಹಾದುಹೋಗುವ ಪ್ರತಿಯೊಬ್ಬನಿಗೂ ನಿನ್ನ ಕಾಲುಗಳನ್ನು ಅಗಲಿಸಿದೆ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದೆ.