Ezekiel 16:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನಾನು ನಿನ್ನನ್ನು ಶಿಕ್ಷಿಸಿದೆನು. ನಾನು ನಿನಗೆ ಕೊಟ್ಟ ದೇಶದಿಂದ ಸಬಲ್ಪ ಭಾಗವನ್ನು ಕಿತ್ತುಕೊಂಡೆನು. ನಿನ್ನ ಶತ್ರುಗಳಾದ ಫಿಲಿಷ್ಟಿಯರ ಹೆಣ್ಣುಮಕ್ಕಳು ನಿನ್ನೊಂದಿಗೆ ತಮಗೆ ಇಷ್ಟ ಘಂದಂತೆ ವರ್ತಿಸಲುಬಿಟ್ಟೆನು. ನಿನ್ನ ಕೆಟ್ಟಕಾರ್ಯಗಳನ್ನು ನೋಡಿ ಅವರೂ ಅಚ್ಚರಿಗೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆನು; ನಿನ್ನನ್ನು ದ್ವೇಷಿಸಿ ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯದ ಕುಮಾರ್ತೆಯರ ಕೈಗೆ ನಿನ್ನನ್ನು ಸಿಕ್ಕಿಸಿದೆನು.
Kannada BSI Bible 2016
ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆನು; ನಿನ್ನನ್ನು ದ್ವೇಷಿಸಿ ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯದ ಕುಮಾರ್ತೆಯರ ಕೈಗೆ ನಿನ್ನನ್ನು ಸಿಕ್ಕಿಸಿದೆನು.
Kannada Bible (KNCL) BSI 2016
“ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆ; ನಿನ್ನನ್ನು ದ್ವೇಷಿಸಿ, ನಿನ್ನ ಕೆಟ್ಟನಡತೆಗೆ ಅಸಹ್ಯಪಡುವ ಪಿಲಿಷ್ಟಿಯ ಕುವರಿಯರ ಕೈಗೆ ನಿನ್ನನ್ನು ಒಪ್ಪಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಭೂಪ್ರದೇಶವನ್ನು ಕಡಿಮೆ ಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು, ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಪುತ್ರಿಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.