Ezekiel 16:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಏನು ಹೇಳಙೇಕೆಂದರೆ, ‘ಜೆರುಸಲೇಮಿಗೆ ನನ್ನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಿನ್ನ ಇತಿಹಾಸವನ್ನು ನೋಡು. ನೀನು ಕಾನಾನ್‌ನಲ್ಲಿ ಜನಿಸಿರುತ್ತೀ. ನಿನ್ನ ತಂದೆಯು ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಯೆರೂಸಲೇಮ್ ಎಂಬಾಕೆಗೆ ಈ ಮಾತನ್ನು ಹೇಳಿಕಳುಹಿಸಿದ್ದಾನೆ, ‘ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ, ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.
Kannada BSI Bible 2016
ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್‌ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಯೆರೂಸಲೇಮೆಂಬಾಕೆಗೆ ಈ ಮಾತನ್ನು ಹೇಳಿಕಳುಹಿಸಿದ್ದಾನೆ - ನೀನು ಹುಟ್ಟಿದ್ದು ಕಾನಾನ್ ದೇಶ, ಅದೇ ನಿನ್ನ ಜನ್ಮಭೂವಿು, ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತೀಯಳು.
Kannada Bible (KNCL) BSI 2016
ಸರ್ವೇಶ್ವರ ದೇವರು ಜೆರುಸಲೇಮೆಂಬಾಕೆಗೆ ಈ ಮಾತನ್ನು ಹೇಳಿ ಕಳುಹಿಸಿದ್ದಾರೆ: “ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ. ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾರೆ: ನಿಮ್ಮ ಪೂರ್ವಜರು ಮತ್ತು ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ; ಅದೇ ನಿನ್ನ ಜನ್ಮಭೂಮಿ. ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.