Ezekiel 16:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾಚಿಕೆಯಿಲ್ಲದ ಸೂಳೆಯಂತೆ ನೀನು ಮಾಡಿದ ಈ ಎಲ್ಲಾ ಕಾರ್ಯಗಳಿಂದ ನಾನು ನಿನ್ನ ವಿರುದ್ಧ ಕೋಪದಿಂದ ತುಂಬಿರುವೆ.” ನನ್ನ ಒಡೆಯನಾದ ಯೆಹೋವನು ಈ ಸಂಗತಿಗಳನ್ನು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿನ್ನ ಮನಸ್ಸು ಮೋಹಕ್ಕೆ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಸ್ತ್ರೀಯಾಗಿರುವೆ.
Kannada BSI Bible 2016
ನೀನು ಈ ಸಂಗತಿ ಗಳನ್ನೆಲ್ಲಾ ಸ್ವಯಿಚ್ಛೆಯಾಗಿ ನಡೆಸುವ ಜಾರಸ್ತ್ರೀಯ ಕೆಲಸವನ್ನೇ ಮಾಡಿದಿಯಲ್ಲಾ! ನಿನ್ನ ಹೃದಯವು ಎಷ್ಟೊಂದು ಬಲಹೀನವಾಗಿದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿನ್ನ ಮನಸ್ಸು ಮೋಹಕ್ಕೆ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡಿಸಿ ಕಟ್ಟಿಲ್ಲದ ಜಾರಸ್ತ್ರೀಯಾಗಿದ್ದೀಯಲ್ಲಾ;
Kannada Bible (KNCL) BSI 2016
ಸರ್ವಶಕ್ತ ದೇವರು ಇಂತೆನ್ನುತ್ತಾರೆ: “ನಿನ್ನ ಮನಸ್ಸು ಮೋಹಪಾಶಕ್ಕೆ ಸಿಕ್ಕಿ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಿಣಿಯಾಗಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನೀನು ನಾಚಿಕೆಯಿಲ್ಲದ ವೇಶ್ಯೆಯಂತೆ ವರ್ತಿಸಿದಾಗ ನಾನು ಕೋಪದಿಂದ ತುಂಬಿದೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.