Ezekiel 16:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಹೇಳಿದ್ದೇನೆಂದರೆ, “ಆದರೆ ನೀನು ವೇಶ್ಯೆಯ ಹಾಗೆ ಪೂರ್ಣವಾಗಿರಲಿಲ್ಲ. ನೀನು ಎತ್ತರದ ಪೂಜಾಸ್ಥಳಗಳನ್ನು ಪ್ರತೀ ರಸ್ತೆಯ ಪ್ರಾರಂಭದಲ್ಲಿಯೂ ಯಜ್ಞವೇದಿಕೆಗಳನ್ನು ಪ್ರತಿ ರಸ್ತೆಯ ಮೂಲೆಗಳಲ್ಲಿಯೂ ಕಟ್ಟಿಸಿರುವೆ. ಆ ಎಲ್ಲಾ ಪುರುಷರೊಂದಿಗೆ ನೀನು ಸಂಭೋಗಿಸಿರುವೆ. ಆದರೆ ಸೂಳೆಯಂತೆ ಅವರಿಂದ ನೀನು ಹಣ ತೆಗೆದುಕೊಳ್ಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಗದ್ದುಗೆಯನ್ನು ಕಟ್ಟಿ, ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿರುವೆ; ದೊರೆತದ್ದನ್ನು ಕಡಿಮೆಯೆಂದು ತಿರಸ್ಕರಿಸುವ ವ್ಯಭಿಚಾರಿಯಂತೆ ನೀನು ನಡೆಯುವವಳಲ್ಲ.
Kannada BSI Bible 2016
ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ;
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಗದ್ದುಗೆಯನ್ನು ಕಟ್ಟಿ ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿದ್ದೀ; ದೊರೆತದ್ದನ್ನು ಕಡಿಮೆಯೆಂದು ತಿರಸ್ಕರಿಸುವ ಸೂಳೆಯಂತೆ ನೀನು ನಡೆಯುವವಳಲ್ಲ.
Kannada Bible (KNCL) BSI 2016
ಒಂದೊಂದು ಬೀದಿಯ ಕೊನೆಯಲ್ಲೂ ನೀನು ಮಂಟಪವನ್ನು ಕಟ್ಟಿ ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿರುವೆ; ದೊರೆತದ್ದನ್ನು ಇದು ಕಡಿಮೆಯೆಂದು ತಿರಸ್ಕರಿಸುವ ಸೂಳೆಯಂತೆ ನೀನು ನಡೆಯುವವಳಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ, ದಿಬ್ಬವನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು, ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿ ನೀನಲ್ಲ.