Ezekiel 16:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಅತಿಯಾದ ಶರೀರದಾಶೆಯಿಂದಾಗಿ, ನಿನ್ನ ಬೆತ್ತಲೆಯ ದೇಹವನ್ನು ನೋಡಿ ನಿನ್ನೊಂದಿಗೆ ಲೈಂಗಿಕ ಸಂಘಂಧವನ್ನು ಹೊಂದಲು ನೀನು ನಿನ್ನ ಪ್ರಿಯತಮರಿಗೂ, ನಿನ್ನ ಹೊಲಸು ದೇವರುಗಳಿಗೂ ಅವಕಾಶ ಮಾಡಿಕೊಟ್ಟೆ. ನೀನು ನಿನ್ನ ಮಕ್ಕಳನ್ನು ಕೊಂದು ಅವರ ರಕ್ತವನ್ನು ಸುರಿಸಿರುವೆ. ಇದು ಆ ಹೊಲಸು ದೇವರುಗಳಿಗೆ ನೀನು ಕೊಟ್ಟ ದಾನ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಮಿತಿಮೀರಿದ ನಿನ್ನ ಕಾಮಾತುರ, ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಪ್ರಿಯರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲಾ ಅಸಹ್ಯ ವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ವಿುತಿಮೀರಿದ ನಿನ್ನ ಕಾಮಾತುರ, ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ವಿುಂಡರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲಾ ಅಸಹ್ಯ ವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,
Kannada Bible (KNCL) BSI 2016
“ಆಹಾ, ಮಿತಿಮೀರಿದ ನಿನ್ನ ಕಾಮಾತುರ! ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಮಿಂಡರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲ ಅಸಹ್ಯವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನಿನ್ನ ಮೋಹವನ್ನು ಸುರಿಸಿದ ಕಾರಣದಿಂದಲೂ, ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ, ನಿನ್ನ ಅಸಹ್ಯ ವಿಗ್ರಹಗಳಿಂದಲೂ, ನೀನು ಆಹುತಿ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ,