Ezekiel 16:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಕಾರಣದಿಂದ, ನೀನು ಸುಖ ಕೊಟ್ಟಿರುವ ನಿನ್ನ ಎಲ್ಲಾ ಪ್ರಿಯರನ್ನು ಅಂದರೆ ಈಗಿನ ಪ್ರಿಯರನ್ನು ಮತ್ತು ನೀನು ತಿರಸ್ಕರಿಸಿರುವ ಹಿಂದಿನ ಪ್ರಿಯರನ್ನೂ ಒಟ್ಟಾಗಿ ಸೇರಿಸಿ, ನಿನ್ನ ಬೆತ್ತಲೆತನವನ್ನು ಅವರು ನೋಡುವಂತೆ ಮಾಡುವೆನು. ಅವರು ನಿನ್ನನ್ನು ಪೂರ್ತಿಯಾಗಿ ನೋಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವುಗಳನ್ನು ನಾನು ನೋಡಿ, ನೀನು ಸಂಭೋಗಿಸಿದ ನಿನ್ನ ಎಲ್ಲಾ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನ್ನ ವಿರುದ್ಧವಾಗಿ ಕೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.
Kannada BSI Bible 2016
ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳನ್ನು ನಾನು ನೋಡಿ ನೀನು ರವಿುಸಿದ ನಿನ್ನ ಎಲ್ಲಾ ವಿುಂಡರನ್ನೂ ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನಗೆ ವಿರುದ್ಧವಾಗಿ ಕೂಡಿಸಿ ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬೈಲುಮಾಡುವೆನು.
Kannada Bible (KNCL) BSI 2016
ಇವುಗಳನ್ನು ನಾನು ನೋಡಿ, ನೀನು ರಮಿಸಿದ ನಿನ್ನ ಎಲ್ಲ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತ ಜಾರರನ್ನೂ, ನೀನು ಹಗೆಮಾಡಿದ ಎಲ್ಲರನ್ನೂ, ಸುತ್ತುಮುತ್ತಲು ನಿನಗೆ ವಿರುದ್ಧ ಒಟ್ಟುಗೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಆನಂದಪಟ್ಟ ನಿನ್ನ ಪ್ರಿಯರೆಲ್ಲರನ್ನು ಮತ್ತು ಹಗೆಮಾಡಿದವರೆಲ್ಲರನ್ನು ಸಹ ಕೂಡಿಸುವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ, ಅವರೆದುರಿಗೆ ನಿನ್ನನ್ನು ಬೆತ್ತಲೆ ಮಾಡಿ, ನಿನ್ನ ಮಾನವನ್ನು ಬಯಲು ಮಾಡುವೆ. ಆಗ ಅವರು ನಿನ್ನನ್ನು ಬೆತ್ತಲೆಯಾಗಿ ನೋಡುವರು.