Ezekiel 16:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ನಿನ್ನ ಮೇಲೆ ನನಗಿರುವ ಕೋಪವನ್ನು ತೊಲಗಿಸುವೆನು; ನಾನು ಶಾಂತನಾಗುವೆನು; ಆ ಬಳಿಕ ನಾನು ಸಿಟ್ಟುಗೊಳ್ಳುವುದೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು, ನನ್ನ ರೋಷವು ನಿನ್ನ ಕಡೆಯಿಂದ ತೊಲಗಿ ಬಿಡುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.
Kannada BSI Bible 2016
ಈ ರೀತಿ ನನ್ನ ಸಿಟ್ಟನ್ನು ನಿನ್ನಲ್ಲಿ ವಿಶ್ರಾಂತಿ ಪಡಿಸುತ್ತೇನೆ, ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ; ಶಾಂತನಾಗಿ ನಿನ್ನ ಮೇಲೆ ಕೋಪ ಗೊಳ್ಳುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು ನನ್ನ ರೋಷವು ನಿನ್ನ ಕಡೆಯಿಂದ ತೊಲಗಿಬಿಡುವದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.
Kannada Bible (KNCL) BSI 2016
ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸುವೆನು. ಆಗ ನನ್ನ ರೋಷವು ನಿನ್ನಿಂದ ದೂರವಾಗುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ರೀತಿ ನಿನ್ನ ಮೇಲಿನ ನನ್ನ ಸಿಟ್ಟನ್ನು ತೀರಿಸುವೆನು. ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ, ಶಾಂತನಾಗಿ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲ.