Ezekiel 16:43 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವೆಲ್ಲಾ ಯಾಕೆ ಸಂಭವಿಸಙೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತುಬಿಟ್ಟಿರುವೆ. ನೀನು ಕೆಟ್ಟಕೆಲಸಗಳನ್ನು ಮಾಡಿ ನಾನು ಕೋಪಿಸಿಕೊಳ್ಳುವಂತೆ ಮಾಡಿರುವೆ. ಆದ್ದರಿಂದ ಆ ಕೆಟ್ಟಕಾರ್ಯ ಮಾಡಿದ್ದಕ್ಕಾಗಿ ನಿನ್ನನ್ನು ಶಿಕ್ಷಿಸಙೇಕಾಗಿ ಘಂತು. ನೀನು ಅದಕ್ಕಿಂತಲೂ ಭಯಂಕರಕೃತ್ಯ ನಡಿಸಲು ಯೋಜನೆ ಹಾಕಿಕೊಂಡಿರುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ನಿನ್ನ ಯೌವನ ಕಾಲವನ್ನು ಜ್ಞಾಪಕಮಾಡಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿರುವೆ” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನಿನ್ನ ಯೌವನಕಾಲವನ್ನು ಜ್ಞಾಪಕಮಾಡಿಕೊಳ್ಳದೆ ಈ ದುಷ್ಕೃತ್ಯಗಳನ್ನೆಲ್ಲಾ ನಡಿಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡಿಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿದ್ದೀಯಲ್ಲಾ. ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ನೀನು ನಿನ್ನ ಯೌವನಕಾಲವನ್ನು ನೆನೆಸಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ, ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯಕಾರ್ಯವನ್ನೂ ಮಾಡಿರುವೆ. ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನೀನು ನಿನ್ನ ಯೌವನದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ, ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿನ್ನ ಇತರ ಎಲ್ಲಾ ಅಸಹ್ಯವಾದವುಗಳ ಜೊತೆಗೆ, ಈ ಅಪವಿತ್ರತೆಯನ್ನು ನೀನು ಮಾಡಲಿಲ್ಲವೇ?