Ezekiel 16:49 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಹೇಳಿದ್ದೇನೆಂದರೆ, “ನಿನ್ನ ತಂಗಿ ಸೊದೋಮ್ ಮತ್ತು ಆಕೆಯ ಹೆಣ್ಣುಮಕ್ಕಳು ಕೊಬ್ಬಿದ ಕಣ್ಣುಳ್ಳವರಾಗಿದ್ದರು. ಅವರಿಗೆ ತಿನ್ನಲು ಙೇಕಾದಷ್ಟಿತ್ತು. ಅವರು ಶಾಂತಿಕರವಾದ ಸುಭದ್ರತೆಯಲ್ಲಿ ಜೀವಿಸಿದರು. ಅವರು ಘಡವರಿಗೆ ಸಹಾಯ ಮಾಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ.
Kannada BSI Bible 2016
ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವದು, ಹೊಟ್ಟೆತುಂಬಿಸಿಕೊಳ್ಳುವದು, ಸ್ವಸುಖದಲ್ಲಿ ಮುಳುಗಿರುವದು, ಇವು ಆಕೆಯಲ್ಲಿಯೂ ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
Kannada Bible (KNCL) BSI 2016
ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಗರ್ವಪಡುವುದು, ಹೊಟ್ಟೆ ತುಂಬಿಸಿಕೊಳ್ಳುವುದು, ಸ್ವಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಆಕೆಯ ಕುವರಿಯರಲ್ಲೂ ಇದ್ದವು. ಅಲ್ಲದೆ ಅವರು ದೀನದಲಿತರಿಗೆ ಬೆಂಬಲವಾಗಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸೊದೋಮ್ ಎಂಬ ನಿನ್ನ ತಂಗಿಯ ಪಾಪವನ್ನು ನೋಡು; ಗರ್ವವ, ಅತಿ ಭೋಜನ, ಸ್ವಾರ್ಥತೆ; ಇವು ಆಕೆಯಲ್ಲಿಯೂ ಆಕೆಯ ಪುತ್ರಿಯರಲ್ಲಿಯೂ ಇದ್ದವು. ಆಕೆಯು ದೀನ ದರಿದ್ರರಿಗೆ ಸಹಾಯ ಮಾಡಲಿಲ್ಲ.