Ezekiel 16:51 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಹೇಳಿದ್ದೇನೆಂದರೆ: “ನೀನು ಮಾಡಿದ ದುಷ್ಕೃತ್ಯಗಳ ಅರ್ಧದಷ್ಟು ಸಮಾರ್ಯವು ಮಾಡಿತ್ತು. ಸಮಾರ್ಯದವರಿಗಿಂತಲೂ ಹೆಚ್ಚಾದ ಭಯಂಕರಕೃತ್ಯಗಳನ್ನು ನೀನು ಮಾಡಿರುವೆ. ನಿನ್ನ ಅಕ್ಕತಂಗಿಯರಿಗಿಂತ ಹೆಚ್ಚಾಗಿ ನೀನು ದುಷ್ಕೃತ್ಯಗಳನ್ನು ಮಾಡಿರುವೆ. ಸಮಾರ್ಯ ಮತ್ತು ಸೊದೋಮ್ ನಿನ್ನೊಂದಿಗೆ ಹೋಲಿಸಿ ನೋಡಿದರೆ ಅವು ಒಳ್ಳೆಯ ಪಟ್ಟಣಗಳಂತೆ ತೋರಿಬರುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಾರ್ಯವೆಂಬಾಕೆಯು ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯಕಾರ್ಯಗಳನ್ನು ನಡೆಸಿರುವೆ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.
Kannada BSI Bible 2016
ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಾರ್ಯವೆಂಬಾಕೆಯು ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯಕಾರ್ಯಗಳನ್ನು ನಡಿಸಿದ್ದೀ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿದಿ.
Kannada Bible (KNCL) BSI 2016
“ಸಮಾರಿಯ ಎಂಬಾಕೆ ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕ ಅಸಹ್ಯಕಾರ್ಯಗಳನ್ನು ನಡೆಸಿರುವೆ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಾರ್ಯವೆಂಬಾಕೆಯು ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದೆ. ನೀನು ಮಾಡಿದ ಲೆಕ್ಕವಿಲ್ಲದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.