Ezekiel 16:53 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಹೇಳಿದ್ದೇನೆಂದರೆ: “ಸೊದೋಮ್ ಮತ್ತು ಅದರ ಸುತ್ತಲೂ ಇದ್ದ ನಗರಗಳನ್ನು ನಾನು ನಾಶಮಾಡಿದೆನು. ನಾನು ಸಮಾರ್ಯವನ್ನು ನಾಶಮಾಡಿದೆನು. ಮತ್ತು ಜೆರುಸಲೇಮೇ, ನಾನು ನಿನ್ನನ್ನು ನಾಶಮಾಡುವೆ. ಆದರೆ ನಾನು ತಿರುಗಿ ಆ ಪಟ್ಟಣಗಳನ್ನು ಕಟ್ಟುವೆನು. ಜೆರುಸಲೇಮೇ, ನಾನು ನಿನ್ನನ್ನೂ ಕಟ್ಟುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸೊದೋಮ್ ಮತ್ತು ಆಕೆಯ ಕುಮಾರ್ತೆಯರು, ಸಮಾರ್ಯ ಮತ್ತು ಆಕೆಯ ಕುಮಾರ್ತೆಯರು, ಇವರ ದುರಾವಸ್ಥೆಯನ್ನು ನಾನು ತಪ್ಪಿಸುವೆನು, ಅದರೊಂದಿಗೆ ನಿನ್ನ ದುರಾವಸ್ಥೆಯನ್ನೂ ತಪ್ಪಿಸುವೆನು.
Kannada BSI Bible 2016
ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊದೋಮ್, ಆಕೆಯ ಕುಮಾರ್ತೆಯರು, ಸಮಾರ್ಯ, ಆಕೆಯ ಕುಮಾರ್ತೆಯರು, ಇವರ ದುರವಸ್ಥೆಯನ್ನು ನಾನು ತಪ್ಪಿಸುವೆನು, ಅದರೊಂದಿಗೆ ನಿನ್ನ ದುರವಸ್ಥೆಯನ್ನೂ ತಪ್ಪಿಸುವೆನು.
Kannada Bible (KNCL) BSI 2016
“ಸೊದೋಮ್ ಮತ್ತು ಆಕೆಯ ಕುವರಿಯರ ಹಾಗೂ ಸಮಾರಿಯ ಮತ್ತು ಆಕೆಯ ಕುವರಿಯರ ಸೌಭಾಗ್ಯವನ್ನು ಪುನಃ ನೀಡುವೆನು. ಅದರೊಂದಿಗೆ ನಿನ್ನ ಸೌಭಾಗ್ಯವನ್ನೂ ಮರಳಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸೊದೋಮ್ ಮತ್ತು ಆಕೆಯ ಕುಮಾರಿಯರ ಹಾಗೂ ಸಮಾರ್ಯ ಮತ್ತು ಆಕೆಯ ಕುಮಾರಿಯ ಸೌಭಾಗ್ಯವನ್ನು ಪುನಃ ನೀಡುವೆನು. ಅದರೊಂದಿಗೆ ನಿನ್ನ ಸೌಭಾಗ್ಯವನ್ನೂ ಮರಳಿಸುವೆನು.